ADVERTISEMENT

ಸಿಬಿಎಸ್‌ಇ ಪರೀಕ್ಷೆ: ಪ್ರಧಾನಿ ಮೋದಿ ಜತೆ ಚರ್ಚೆ

ಪಿಟಿಐ
Published 14 ಏಪ್ರಿಲ್ 2021, 7:03 IST
Last Updated 14 ಏಪ್ರಿಲ್ 2021, 7:03 IST
ಸಿಬಿಎಸ್‌ಇ
ಸಿಬಿಎಸ್‌ಇ   

ನವದೆಹಲಿ: ಸಿಬಿಎಸ್‌ಇ ಪರೀಕ್ಷೆ ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ನಡೆಯಲಿದೆ.

ಕೇಂದ್ರ ಶಿಕ್ಷಣ ಸಚಿವ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೇ 4ರಿಂದ 10 ಮತ್ತು 12ನೇ ತರಗತಿಯ ಪರೀಕ್ಷೆಗಳು ಆರಂಭವಾಗಲಿವೆ. ದೇಶದಾದ್ಯಂತ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಪರೀಕ್ಷೆಗಳನ್ನು ರದ್ದುಪಡಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸೇರಿದಂತೆ ಹಲವು ನಾಯಕರು ಈಗಾಗಲೇ ಒತ್ತಾಯಿಸಿದ್ದಾರೆ.

ಹೀಗಾಗಿ, ಬುಧವಾರ ನಡೆಯುವ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಸಿಬಿಎಸ್‌ಇ ಮತ್ತು ಐಸಿಎಸ್‌ಇ ಬೋರ್ಡ್‌ ಪರೀಕ್ಷೆಗಳನ್ನು ಮುಂದೂಡುವಂತೆ ಕೋರಿ ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್‌ ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.