ADVERTISEMENT

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಜುಲೈ 2022, 7:20 IST
Last Updated 26 ಜುಲೈ 2022, 7:20 IST
ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು (ಚಿತ್ರಕೃಪೆ: @rashtrapatibhvn)
ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು (ಚಿತ್ರಕೃಪೆ: @rashtrapatibhvn)   

ನವದೆಹಲಿ: ದ್ರೌಪದಿ ಮುರ್ಮು ಅವರು ನೂತನ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಮೋದಿ ಭೇಟಿ ಕುರಿತು ರಾಷ್ಟ್ರಪತಿ ಭವನ ಟ್ವೀಟ್‌ ಮಾಡಿದೆ.

ಜಾರ್ಖಂಡ್‌ನ ಮಾಜಿ ರಾಜ್ಯಪಾಲೆ ಆಗಿರುವ ಮುರ್ಮು ಅವರು ದೇಶದ 15ನೇ ರಾಷ್ಟ್ರಪತಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

ADVERTISEMENT

ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿ ಮಾತನಾಡಿದ್ದ ಮುರ್ಮು ಅವರು, ರಾಷ್ಟ್ರಪತಿ ಹುದ್ದೆಗೆ ಏರಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ. ಭಾರತದ ಎಲ್ಲ ಬಡವರ ಸಾಧನೆಯಾಗಿದೆ. ಈ ಹುದ್ದೆಗೆ ನನ್ನ ಹೆಸರನ್ನು ಘೋಷಿಸಿದ್ದು, ದೇಶದಲ್ಲಿ ಬಡವರು ಕನಸನ್ನು ಕಾಣುವುದಷ್ಟೇ ಅಲ್ಲ. ಅದನ್ನು ಸಾಕಾರಗೊಳಿಸಿಕೊಳ್ಳಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.