ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ಅಂತ್ಯ ಸಂಸ್ಕಾರ ಗಾಂಧಿನಗರದಲ್ಲಿರುವ ಚಿತಾಗಾರದಲ್ಲಿ ನೆರವೇರಿತು.ತಾಯಿಯ ಪಾರ್ಥಿವ ಶರೀರದ ಅಂತಿಮ ಯಾತ್ರೆ ವೇಳೆ ಹೆಗಲು ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರುಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.
ಶತಾಯುಷಿ ಹೀರಾಬೆನ್(100) ಅವರು ಅನಾರೋಗ್ಯದಿಂದಾಗಿ ಶುಕ್ರವಾರಬೆಳಗಿನ ಜಾವ 3.39ಕ್ಕೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನುಅಹಮದಾಬಾದ್‌ನಯು.ಎನ್.ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಆ್ಯಂಡ್ ರೀಸರ್ಚ್ ಸೆಂಟರ್ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿತ್ತು.
ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇಗಾಂಧಿನಗರದ ಹೊರವಲಯದಲ್ಲಿರುವ ರಾಯ್‌ಸನ್ ಗ್ರಾಮಕ್ಕೆ ಆಗಮಿಸಿದಮೋದಿ ಅವರು, ಅಂತಿಮ ದರ್ಶನ ಪಡೆದರು.
'ನೂರು ವರ್ಷಗಳ ಶ್ರೇಷ್ಠ ಪ್ರಯಾಣ ಮುಗಿದಿದೆ. ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಜೀವನವು ತಪಸ್ವಿಯ ಪ್ರಯಾಣವಾಗಿತ್ತು. ನಿಷ್ಕಾಮಕರ್ಮಯೋಗಿಯ ಜೀವನಮತ್ತು ಮೌಲ್ಯಗಳಿಗೆ ಬದ್ಧವಾದ ಬದುಕಿನಸಂಕೇತವಾಗಿದ್ದರು' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ನಿಧನ
ಮತ್ತೊಂದು ಟ್ವೀಟ್‌ನಲ್ಲಿ, ಅವರ (ಅಮ್ಮನ) 100ನೇ ವರ್ಷದ ಹುಟ್ಟುಹಬ್ಬದಂದು ಭೇಟಿಯಾಗಿದ್ದಾಗ, ಸದಾ ನೆನಪಿನಲ್ಲಿ ಉಳಿಯುವಂತಹ ಮಾತನ್ನು ಹೇಳಿದ್ದರು. 'ನಿನ್ನ ತಲೆಯಿಂದ ಕೆಲಸ ಮಾಡು. ಜೀವನವನ್ನು ಶುದ್ಧತೆಯೊಂದಿಗೆಬದುಕು' ಎಂದಿದ್ದರು ಎಂದು ಸ್ಮರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.