ADVERTISEMENT

ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ಮೋದಿ, ಸೋನಿಯಾ ಸೇರಿ ಗಣ್ಯರಿಂದ ನಮನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಅಕ್ಟೋಬರ್ 2021, 4:13 IST
Last Updated 2 ಅಕ್ಟೋಬರ್ 2021, 4:13 IST
ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಪುಷ್ಪ ನಮನ ಸಲ್ಲಿಸಿದರು. –ರಾಯಿಟರ್ಸ್‌ ಚಿತ್ರ
ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಪುಷ್ಪ ನಮನ ಸಲ್ಲಿಸಿದರು. –ರಾಯಿಟರ್ಸ್‌ ಚಿತ್ರ   

ನವದೆಹಲಿ: ದೇಶದಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 152ನೇ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ 117ನೇ ಜನ್ಮದಿನವನ್ನು ಆಚರಿಸಲಾಗುತ್ತಿದೆ.

ಶನಿವಾರ ಗಾಂಧಿ ಜಯಂತಿ ಅಂಗವಾಗಿ ರಾಜ್‌ಘಾಟ್‌ನಲ್ಲಿರುವ ಗಾಂಧಿಜಿ ಅವರ ಸ್ಮಾರಕಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.

ಬಳಿಕ ಗಣ್ಯರೆಲ್ಲರೂ ವಿಜಯ್ ಘಾಟ್‌ನಲ್ಲಿರುವ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಸ್ಮಾರಕ ತೆರಳಿ ನಮನ ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.