ADVERTISEMENT

ಜವಾಹರ್‌ಲಾಲ್ ನೆಹರೂ ಪುಣ್ಯತಿಥಿ: ಪ್ರಧಾನಿ ಮೋದಿ, ಖರ್ಗೆ ಸೇರಿದಂತೆ ಗಣ್ಯರಿಂದ ನಮನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಮೇ 2023, 4:50 IST
Last Updated 27 ಮೇ 2023, 4:50 IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ದೆಹಲಿಯ ಶಾಂತಿ ವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿ, ಪುಷ್ಪ ನಮನ ಸಲ್ಲಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ದೆಹಲಿಯ ಶಾಂತಿ ವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿ, ಪುಷ್ಪ ನಮನ ಸಲ್ಲಿಸಿದರು.   

ನವದೆಹಲಿ: ಇಂದು (ಶನಿವಾರ) ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ 59ನೇ ಪುಣ್ಯತಿಥಿ. ಈ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರ ಗಣ್ಯರು ನಮನ ಸಲ್ಲಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಸೇರಿದಂತೆ ಇತರರು ದೆಹಲಿಯ ಶಾಂತಿ ವನದಲ್ಲಿರುವ ನೆಹರೂ ಅವರ ಸ್ಮಾರಕಕ್ಕೆ ಭೇಟಿ ನೀಡಿ, ಪುಷ್ಪ ನಮನ ಸಲ್ಲಿಸಿದ್ದಾರೆ.

‘ಇಂದು ನಮ್ಮ ಮೊದಲ ಪ್ರಧಾನ ಮಂತ್ರಿ ಮತ್ತು ‘ಆಧುನಿಕ ಭಾರತದ ವಾಸ್ತುಶಿಲ್ಪಿ’ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿ. ಹೊಸ ಆರ್ಥಿಕ ನೀತಿಗಳು ಮತ್ತು ಕೈಗಾರಿಕಾ ಸ್ಥಾಪನೆಗಳ ಮೂಲಕ ರಾಷ್ಟ್ರವನ್ನು ಎತ್ತರಕ್ಕೆ ಮುನ್ನಡೆಸಿದ ದಾರ್ಶನಿಕ. ಅವರ ಮಾರ್ಗದರ್ಶನದಲ್ಲಿ ಐಐಟಿಗಳು, ಐಐಎಂಗಳು, ಎಐಐಎಂಎಸ್, ಡಿಆರ್‌ಡಿಒ ಸೇರಿದಂತೆ ಪರಮಾಣು ಮತ್ತು ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತ ಅಭೂತಪೂರ್ವ ಸಾಧನೆ ಮಾಡಿದೆ. ನೆಹರೂ ಅವರು ಪರಂಪರೆಯನ್ನು ನಾವು ಗೌರವಿಸುತ್ತೇವೆ’ ಎಂದು ಕಾಂಗ್ರೆಸ್‌ ಅಧಿಕೃತ ಟ್ವಿಟರ್‌ನಲ್ಲಿ ಹೇಳಿದೆ.

ADVERTISEMENT

‘ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿಯಂದು ಅವರಿಗೆ ನಮನಗಳು’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ನೆಹರೂ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

1947ರ ಆಗಸ್ಟ್‌ 15ರಂದು ಸ್ವಾತಂತ್ರ್ಯಭಾರತದ ಮೊದಲ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನೆಹರು ಅವರು 1964ರ ವರೆಗೂ ಅಧಿಕಾರದಲ್ಲಿದರು. ಅದೇ ವರ್ಷ ಮೇ 27ರಂದು ನಿಧನರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.