ADVERTISEMENT

ಲಾಲಾ ಲಜಪತ ರಾಯ್‌ ಜನ್ಮ ದಿನಾಚರಣೆ: ಪ್ರಧಾನಿ ಗೌರವ

ಪಿಟಿಐ
Published 28 ಜನವರಿ 2021, 5:31 IST
Last Updated 28 ಜನವರಿ 2021, 5:31 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಲಾಲಾ ಲಜಪತ ರಾಯ್‌ ಅವರ ಜನ್ಮ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಗೌರವ ನಮನ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ಲಾಲಾ ಲಜಪತ ರಾಯ್‌ ಅವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅಳಿಸಲಾಗದ ಕೊಡುಗೆ ನೀಡಿದ್ದಾರೆ. ಅವರು ಎಲ್ಲಾ ಪೀಳಿಗೆಗೆ ಸ್ಫೂರ್ತಿಯಾಗಿದ್ದಾರೆ’ ಎಂದು ಹೇಳಿದ್ದಾರೆ.

ಲಾಲಾ ಲಜಪತ ರಾಯ್‌ ಅವರು 1865ರಲ್ಲಿ ಜನಿಸಿದರು. ಅವರನ್ನು ಪಂಜಾಬಿನ ಕೇಸರಿ ಎಂದೂ ಕರೆಯಲಾಗುತ್ತದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.