ADVERTISEMENT

ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಜನವರಿ 2025, 6:47 IST
Last Updated 29 ಜನವರಿ 2025, 6:47 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸಾಗುತ್ತಿರುವ ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಕಾಲ್ತುಳಿತ ಸಂಭವಿಸಿ ಹಲವರು ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

‘ಪ್ರಯಾಗ್‌ರಾಜ್‌ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿರುವುದು ಅತ್ಯಂತ ದುಃಖಕರ. ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ನನ್ನ ಸಂತಾಪಗಳು. ಘಟನೆಯಲ್ಲಿ ಗಾಯಗೊಂಡಿರುವವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮೋದಿ ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಘಟನಾ ಸ್ಥಳದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸುವುದರ ಜತೆಗೆ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಎಲ್ಲ ರೀತಿಯಲ್ಲೂ ಸಹಾಯ ಮಾಡುತ್ತಿದೆ. ನಾನು ಮುಖ್ಯಮಂತ್ರಿ ಯೋಗಿ ಜೀ ಅವರೊಂದಿಗೆ ಮಾತನಾಡಿದ್ದೇನೆ. ಜತೆಗೆ, ರಾಜ್ಯ ಸರ್ಕಾರದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ’ ಎಂದು ಮೋದಿ ತಿಳಿಸಿದ್ದಾರೆ.

ADVERTISEMENT

ಮೌನಿ ಅಮಾವಾಸ್ಯೆ ದಿನವಾದ ಇಂದು (ಬುಧವಾರ) ತ್ರಿವೇಣಿ ಸಂಗಮದಲ್ಲಿ ಪ್ರವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಪ್ರಯಾಗ್‌ರಾಜ್‌ನಲ್ಲಿ ಜಮಾಯಿಸಿದ್ದಾರೆ. ಈ ನಡುವೆ ಉಂಟಾದ ಕಾಲ್ತುಳಿತದಲ್ಲಿ ಹಲವರು ಮೃತಪಟ್ಟಿರುವ ಹಾಗೂ ಅನೇಕ ಮಂದಿ ಗಾಯಗೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸಾವು-ನೋವಿನ ಬಗ್ಗೆ ಅಧಿಕೃತ ವರದಿ ಇನ್ನಷ್ಟೇ ಬರಬೇಕಿದೆ.

ಮಹಾಕುಂಭಮೇಳದ ಎರಡನೇ ‘ಪವಿತ್ರ ಸ್ನಾನ’ ಇದಾಗಿದ್ದು, ಇಂದು ಒಂದೇ ದಿನ 10 ಕೋಟಿ ಭಕ್ತರು ಸಂಗಮದಲ್ಲಿ ಮಿಂದೇಳುವ ನಿರೀಕ್ಷೆಯಿದೆ.

ಜನವರಿ 13 ರಂದು ಆರಂಭವಾಗಿರುವ ಮಹಾಕುಂಭಮೇಳವು ಫೆಬ್ರುವರಿ 26ರವರೆಗೆ ನಡೆಯಲಿದೆ. ಈ ಬಾರಿ ಕುಂಭಮೇಳಕ್ಕೆ 45 ಕೋಟಿ ಜನ ಆಗಮಿಸುವ ನಿರೀಕ್ಷೆ ಇದೆ ಎಂದು ಸರ್ಕಾರ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.