ADVERTISEMENT

ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರಿಂದ ಹೈದರಾಬಾದ್‌ ಹೆಸರು ಬದಲು ಪ್ರಸ್ತಾವ

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 18:24 IST
Last Updated 3 ಜುಲೈ 2022, 18:24 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ಹೈದರಾಬಾದ್‌: ಹೈದರಾಬಾದ್‌ನ ಹೆಸರನ್ನು ಭಾಗ್ಯನಗರ ಎಂದು ಬದಲಿಸುವ ಮಾತನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ನಾಯಕರು ಕಾರ್ಯಕಾರಿಣಿಯಲ್ಲಿ ಆಡಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಮೋದಿ, ‘ಏಕ ಭಾರತದ ಕಲ್ಪನೆಯನ್ನು ಸರ್ದಾರ್ ಪಟೇಲರು ಮೊದಲು ಪ್ರಚುರ ಪಡಿಸಿದ್ದು ಇದೇ ಭಾಗ್ಯನಗರದಲ್ಲಿ’ ಎಂದು ಹೇಳಿದ್ದಾರೆ.

ಹೈದರಾಬಾದ್‌ನ ಹೆಸರನ್ನು ಭಾಗ್ಯನಗರ ಎಂದು ಬದಲಿಸಬೇಕು ಎಂದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸ್ಥಳೀಯ ನಾಯಕರು ಈ ಹಿಂದೆಯೇ ಬೇಡಿಕೆ ಇಟ್ಟಿದ್ದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ‘ಹೈದರಾಬಾದ್‌ ಅನ್ನು ಭಾಗ್ಯನಗರವಾಗಿ ಪರಿವರ್ತಿಸಬೇಕಿದ್ದರೆ ಬಿಜೆಪಿಗೆ ಮತ ನೀಡಿ’ ಎಂದು ಹೇಳಿದ್ದಾರೆ. ಕೇಂದ್ರ ಸಚಿವ ಪೀಯೂಷ್ ಗೋಯಲ್, ‘ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಭಾಗ್ಯನಗರ ಎಂದು ನಾಮಕರಣ ಮಾಡುವ ಬಗ್ಗೆ ಮುಖ್ಯಮಂತ್ರಿ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.