ADVERTISEMENT

ಸಮಾಜವಾದದಿಂದ ‘ಪರಿವಾರವಾದ’ಕ್ಕೆ ತಿರುಗಿದ ಸಮಾಜವಾದಿ ಪಕ್ಷ: ಪ್ರಧಾನಿ ಮೋದಿ ಟೀಕೆ

ಪಿಟಿಐ
Published 20 ಅಕ್ಟೋಬರ್ 2021, 13:20 IST
Last Updated 20 ಅಕ್ಟೋಬರ್ 2021, 13:20 IST
ಪ್ರಧಾನಿ ನರೇಂದ್ರ ಮೋದಿ (ಪಿಟಿಐ ಸಂಗ್ರಹ ಚಿತ್ರ)
ಪ್ರಧಾನಿ ನರೇಂದ್ರ ಮೋದಿ (ಪಿಟಿಐ ಸಂಗ್ರಹ ಚಿತ್ರ)   

ಕುಶೀನಗರ: ‘ಸಮಾಜವಾದಿ ಪಕ್ಷವು ರಾಮ ಮನೋಹರ್ ಲೋಹಿಯಾ ಅವರ ಸಿದ್ಧಾಂತದಿಂದ ಬದಲಾಗಿದೆ. ಆ ಪಕ್ಷದ ನಾಯಕರು ಈಗ ‘ಪರಿವಾರವಾದ’ವನ್ನು (ವಂಶ ರಾಜಕಾರಣ) ಉತ್ತೇಜಿಸುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

ಉತ್ತರ ಪ್ರದೇಶದ ಕುಶೀನಗರದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಹಾಗೂ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ರ್‍ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.

ಸಹಾನುಭೂತಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ರಾಮ ಮನೋಹರ್ ಲೋಹಿಯಾ ಅವರು ಹೇಳುತ್ತಿದ್ದರು. ಆದರೆ ಉತ್ತರ ಪ್ರದೇಶದಲ್ಲಿ ಈ ಹಿಂದೆ ಆಡಳಿತ ನಡೆಸಿದ್ದವರು (ಸಮಾಜವಾದಿ ಪಕ್ಷವನ್ನು ಉದ್ದೇಶಿಸಿ) ಬಡವರ ನೋವಿನ ಬಗ್ಗೆ ಗಮನವನ್ನೇ ಹರಿಸಿಲ್ಲ. ಹಿಂದಿನ ಸರ್ಕಾರಗಳು ಭ್ರಷ್ಟಾಚಾರ ಮತ್ತು ಅಪರಾಧ ಕೃತ್ಯಗಳ ಜತೆಗೆ ನಂಟು ಹೊಂದಿದ್ದವು ಎಂದು ಮೋದಿ ಆರೋಪಿಸಿದ್ದಾರೆ.

ಇವರು ಸಮಾಜವಾದಿಗಳಲ್ಲ, ವಂಶಾಡಳಿತವಾದಿಗಳು ಎಂಬುದು ಉತ್ತರ ಪ್ರದೇಶದ ಜನತೆಗೆ ಚೆನ್ನಾಗಿ ಗೊತ್ತಿದೆ ಎಂದೂ ಅವರು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.