ADVERTISEMENT

ಡಿಜಿಟಲ್ ಗೇಮಿಂಗ್ ಕ್ಷೇತ್ರವನ್ನು ಭಾರತ ಮುನ್ನಡೆಸುವಂತಾಗಬೇಕು: ಪ್ರಧಾನಿ ಮೋದಿ

ಪಿಟಿಐ
Published 23 ಆಗಸ್ಟ್ 2020, 1:22 IST
Last Updated 23 ಆಗಸ್ಟ್ 2020, 1:22 IST
ನರೇಂದ್ರ ಮೋದಿ (ಸಂಗ್ರಹ ಚಿತ್ರ)
ನರೇಂದ್ರ ಮೋದಿ (ಸಂಗ್ರಹ ಚಿತ್ರ)   

ನವದೆಹಲಿ: ಡಿಜಿಟಲ್ ಗೇಮಿಂಗ್ ಕ್ಷೇತ್ರವನ್ನು ಭಾರತ ಮುನ್ನಡೆಸುವಂತಾಗಬೇಕು. ನಮ್ಮ ಸಂಸ್ಕೃತಿ, ಜಾನಪದ ಕತೆಗಳಿಂದ ಪ್ರೇರಣೆಗೊಂಡು ಗೇಮ್‌ಗಳನ್ನು ಅಭಿವೃದ್ಧಿಪಡಿಸುವ ಮೂಲಕ ಸಾಮರ್ಥ್ಯ ಪ್ರಕಟಪಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶದಲ್ಲಿ ಆಟಿಕೆ ಉತ್ಪಾದನೆ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿ ಶನಿವಾರ ಸಭೆ ನಡೆಸಿ ಮಾತನಾಡಿದ ಅವರು, ಜಾಗತಿಕ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸುವುದರ ಜತೆಗೆ ತಂತ್ರಜ್ಞಾನ ಹಾಗೂ ಅನ್ವೇಷಣೆಗಳನ್ನು ಸರಿಯಾಗಿ ಬಳಸಿಕೊಳ್ಳುವುದರತ್ತಲೂ ಗಮನಹರಿಸಬೇಕು ಎಂದು ಹೆಳಿದ್ದಾರೆ.

‘ಏಕ ಭಾರತ್, ಶ್ರೇಷ್ಠ ಭಾರತ್’ ಉತ್ಸಾಹ ಹೆಚ್ಚಿಸಲು ಆಟಿಕೆ ಉತ್ಪಾದನೆ ಅತ್ಯುತ್ತಮ ಮಾಧ್ಯಮವಾಗಬಹುದು ಎಂದೂ ಅವರು ಹೇಳಿದ್ದಾರೆ.

ADVERTISEMENT

ಸಭೆಯ ಬಳಿಕ ಟ್ವೀಟ್ ಮಾಡಿರುವ ಮೋದಿ, ‘ದೇಶದಲ್ಲಿ ಆಟಿಕೆ ಉತ್ಪಾದನೆ ಹೆಚ್ಚಿಸುವ ಮಾರ್ಗಗಳ ಬಗ್ಗೆ ಮಾತುಕತೆ ನಡೆಸಿದೆ. ದೈಹಿಕ ಸಾಮರ್ಥ್ಯ, ಸಮಗ್ರ ವ್ಯಕ್ತಿತ್ವ ಅಭಿವೃದ್ಧಿಗೆ ಪೂರಕವಾದ ಆಟಿಕೆಗಳನ್ನು ಉತ್ಪಾದಿಸುವುದು ಮತ್ತು ಆ ಕ್ಷೇತ್ರವನ್ನು ಬೆಂಬಲಿಸುವುದು ನಮ್ಮ ಆದ್ಯತೆಯಾಗಿದೆ’ ಎಂದು ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.