ADVERTISEMENT

ದಶಕದ ನಂತರ ವೇದಿಕೆ ಹಂಚಿಕೊಂಡ ನರೇಂದ್ರ ಮೋದಿ, ನಿತೀಶ್ ಕುಮಾರ್ 

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2019, 7:43 IST
Last Updated 3 ಮಾರ್ಚ್ 2019, 7:43 IST
   

ಪಟ್ನಾ: ದಶಕದ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಗಾಂಧಿ ಮೈದಾನದಲ್ಲಿ ನಡೆಯುತ್ತಿರುವ ಎನ್‌ಡಿಎ ಸಂಕಲ್ಪ ರ್‍ಯಾಲಿಯಲ್ಲಿ ವೇದಿಕೆ ಹಂಚಿಕೊಂಡಿದ್ದಾರೆ.

2009ರಲ್ಲಿ ರಾಜಕೀಯ ರ್‍ಯಾಲಿಯಲ್ಲಿ ವೇದಿಕೆ ಹಂಚಿಕೊಂಡ ಇವರು 10 ವರ್ಷಗಳ ನಂತರ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.
ಫೆಬ್ರುವರಿ 17ರಂದು ಬೆಗುಸರಾಯಿಯಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದ ಮೋದಿಇದೀಗ ಎರಡನೇ ಬಾರಿ ಬಿಹಾರಕ್ಕೆ ಭೇಟಿ ನೀಡಿದ್ದಾರೆ.

ವಿಂಗ್ ಕಮಾಂಡರ್ ಅಭಿನಂದನ್ ಶುಕ್ರವಾರ ಭಾರತಕ್ಕೆ ವಾಪಸ್ ಆದಾಗ, ಅಭಿನಂದನ್ಅವರಿಗೆ ಸ್ವಾಗತ. ವಿಶ್ವ ರಾಷ್ಟ್ರಗಳ ವೇದಿಕೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು.ಭಯೋತ್ಪಾದನೆ ವಿರುದ್ಧ ಜಗತ್ತು ಒಗ್ಗಟ್ಟಾಗಿದೆ ಎಂದು ಬಿಹಾರದ ಬಿಜೆಪಿ ಸಂಸದ ಪಕ್ಷದ ಉಸ್ತುವಾರಿ ವಹಿಸಿರುವ ಭುಪೇಂದ್ರ ಯಾದವ್ ಶನಿವಾರ ಹೇಳಿದ್ದರು.

ADVERTISEMENT

ಕೇಂದ್ರ ಸಚಿವ ರಾಮವಿಲಾಸ್ ಪಾಸ್ವಾನ್ ಸೇರಿದಂತೆ ಬಿಹಾರದಲ್ಲಿರುವ ಎಲ್ಲಕೇಂದ್ರ ಸಚಿವರು ಈ ರ್‍ಯಾಲಿಯಲ್ಲಿ ಭಾಗಿಯಾಗಿದ್ದಾರೆ.

2009 ಲೋಕಸಭಾ ಚುನಾವಣೆ ವೇಳೆ ಲುಧಿಯಾನದಲ್ಲಿ ಮೋದಿ ಮತ್ತು ನಿತೀಶ್ ಕುಮಾರ್ ವೇದಿಕೆ ಹಂಚಿಕೊಂಡಿದ್ದರು. 2013 ಜೂನ್‍ನಲ್ಲಿ ನಿತೀಶ್ ಕುಮಾರ್ ಅವರ ಜೆಡಿ(ಯು) ಪಕ್ಷ ಎನ್‍ಡಿಎ ತೊರೆದು2015ರ ವಿಧಾನಸಭೆಗೆ ಮುನ್ನ ಆರ್‌ಜೆಡಿ ಮತ್ತು ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.