ನವದೆಹಲಿ: ಕೋವಿಡ್–19 ಸ್ಥಿತಿಗತಿಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ, ಪಂಜಾಬ್, ಬಿಹಾರ ಮತ್ತು ಉತ್ತರಾಖಂಡ ಮುಖ್ಯಮಂತ್ರಿಗಳ ಜತೆ ಭಾನುವಾರ ಮಾತುಕತೆ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕೋವಿಡ್ ಸ್ಥಿತಿಗತಿಗೆ ಸಂಬಂಧಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು, ರಾಜ್ಯಪಾಲರ ಜತೆ ಪ್ರಧಾನಿಯವರು ಕಳೆದ ಕೆಲವು ದಿನಗಳಿಂದ ಮಾತುಕತೆ ನಡೆಸುತ್ತಿದ್ದಾರೆ. ಆ ಮೂಲಕ ಆಯಾ ರಾಜ್ಯಗಳ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಜತೆಗೆ ಸಲಹೆ–ಸೂಚನೆಗಳನ್ನೂ ನೀಡುತ್ತಿದ್ದಾರೆ.
ಸೋಂಕಿನ ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಮಾತುಕತೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರಧಾನಿಯವರಿಗೆ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.