ADVERTISEMENT

ಕೋವಿಡ್‌: ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮೋದಿ ಮಾತುಕತೆ

ಪಿಟಿಐ
Published 16 ಮೇ 2021, 9:07 IST
Last Updated 16 ಮೇ 2021, 9:07 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ಉತ್ತರ ಪ್ರದೇಶ, ರಾಜಸ್ಥಾನ, ಛತ್ತೀಸಗಡ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಾತುಕತೆ ನಡೆಸಿ, ಆಯಾ ರಾಜ್ಯಗಳಲ್ಲಿನ ಕೋವಿಡ್‌–19 ಪರಿಸ್ಥಿತಿ ಕುರಿತು ಮಾಹಿತಿ ಪಡೆದರು.

ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮಾತುಕತೆ ನಡೆಸುತ್ತಿದ್ದು, ಕೋವಿಡ್‌ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ಪಡೆಯುತ್ತಿದ್ದಾರೆ.

ಭಾನುವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 3.11 ಲಕ್ಷ ಪ್ರಕರಣಗಳು ವರದಿಯಾಗಿವೆ. 25 ದಿನಗಳ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ಒಂದು ದಿನದಲ್ಲಿ ಅತಿ ಕಡಿಮೆ ಪ್ರಕರಣಗಳು ವರದಿಯಾದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ADVERTISEMENT

ಕಳೆದ 24 ಗಂಟೆಗಳಲ್ಲಿ 4,077 ಜನರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 2,70,284ಕ್ಕೇರಿದೆ ಎಂದೂ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.