ADVERTISEMENT

ಭಾರತಕ್ಕೆ 29 ಪ್ರಾಚೀನ ವಸ್ತುಗಳನ್ನು ಹಿಂದಿರುಗಿಸಿದ ಆಸ್ಟ್ರೇಲಿಯಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಮಾರ್ಚ್ 2022, 9:33 IST
Last Updated 21 ಮಾರ್ಚ್ 2022, 9:33 IST
ಪ್ರಾಚೀನ ವಸ್ತುಗಳನ್ನು ಪರಿಶೀಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ
ಪ್ರಾಚೀನ ವಸ್ತುಗಳನ್ನು ಪರಿಶೀಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: 29 ಪ್ರಾಚೀನ ವಸ್ತುಗಳನ್ನು ಹಿಂದಿರುಗಿಸಿರುವ ಆಸ್ಟ್ರೇಲಿಯಾಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಸಲ್ಲಿಸಿದ್ದಾರೆ.

ಈ ಕುರಿತು ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ) ಮಾಹಿತಿ ನೀಡಿದೆ.

ಪ್ರಾಚೀನ ವಸ್ತುಗಳನ್ನು ಆರು ವಿಭಾಗಗಳಾಗಿ ವಿಂಗಡಿಸಲಾಗಿದೆ. ಇವು ಶಿವ ದೇವರು, ಶಕ್ತಿ ಪೂಜೆ, ಭಗವಾನ್ ವಿಷ್ಣು, ಜೈನ ಸಂಪ್ರದಾಯ, ವರ್ಣಚಿತ್ರಗಳು ಮತ್ತು ಅಲಂಕಾರಿಕ ವಸ್ತುಗಳನ್ನು ಒಳಗೊಂಡಿವೆ.

ADVERTISEMENT

ಬೇರೆ ಬೇರೆ ಶತಮಾನಕ್ಕೆ ಸೇರಿದ ಪ್ರಾಚೀನ ವಸ್ತುಗಳನ್ನು ಇವು ಒಳಗೊಂಡಿವೆ.ಬಳಿಕ ಇವುಗಳನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದ್ದಾರೆ.

ಮರಳುಗಲ್ಲು, ಅಮೃತಶಿಲೆ, ಕಂಚು, ಕಾಗದ, ಹಿತ್ತಾಳೆಗಳಿಂದ ಶಿಲ್ಪ ಹಾಗೂ ವರ್ಣಶಿಲ್ಪಗಳನ್ನು ರಚಿಸಲಾಗಿದ್ದು, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳಕ್ಕೆ ಸೇರಿದ್ದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.