ADVERTISEMENT

ಐಐಟಿ ನಿರ್ದೇಶಕರೊಂದಿಗೆ ಇಂದು ಪ್ರಧಾನಿ ಮೋದಿ ಸಂವಾದ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಜುಲೈ 2021, 4:17 IST
Last Updated 8 ಜುಲೈ 2021, 4:17 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ; ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 11 ಕ್ಕೆ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐಐಟಿ) ನಿರ್ದೇಶಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ವರ್ಚುವಲ್ ಮೂಲಕ ನಡೆಯಲಿದ್ದು, ನಿನ್ನೆಯಷ್ಟೇ ಶಿಕ್ಷಣ ಸಚಿವರಾಗಿ ಅಧಿಕಾರವಹಿಸಿಕೊಂಡಿರುವ ಧರ್ಮೇಂದ್ರ ಪ್ರಧಾನ್ ಪ್ರಧಾನಿ ಜೊತೆ ಭಾಗಿಯಾಗಲಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಮೋದಿ ಅವರು ಐಐಟಿ ಖರಗಪುರ್ 66 ನೇ ಘಟಿಕೋತ್ಸವದಲ್ಲಿ ಭಾಗಿಯಾಗಿದ್ದರು

ADVERTISEMENT

ಬುಧವಾರ ಪ್ರಧಾನಿಯವರು ತಮ್ಮ ಮಂತ್ರಿ ಮಂಡಲವನ್ನು ಪುನರ್‌ರಚನೆಮಾಡಿದರು. ಇದರಲ್ಲಿ ಹಳೆಯ 12 ಸಚಿವರನ್ನು ಕೈ ಬಿಟ್ಟು ಹೊಸದಾಗಿ 36 ಸಂಸದರಿಗೆ ಸಚಿವ ಸ್ಥಾನ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.