ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿ ರಾಜಸ್ಥಾನದ ಜೈಸಾಲ್ಮೇರ್‌ನ ಲೋಂಗೆವಾಲದಲ್ಲಿ ಯೋಧರ ಜತೆ ದೀಪಾವಳಿ ಆಚರಿಸಲಿದ್ದಾರೆ.
ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಎಂ.ಎಂ.ನರವಣೆ, ಬಿಎಸ್‌ಎಫ್ ಮಹಾ ನಿರ್ದೇಶಕ ರಾಕೇಶ್ ಅಸ್ತಾನಾ ಮೋದಿ ಜತೆ ಇರಲಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ಈ ಬಾರಿ ದೀಪಾವಳಿ ಹಬ್ಬದ ದಿನದಂದು ದೇಶದ ಗಡಿ ಕಾಯುತ್ತಿರುವ ಯೋಧರಿಗೆ ಸೆಲ್ಯೂಟ್ ಹೊಡೆಯಲು ದೀಪಗಳನ್ನು ಬೆಳಗಿಸಿ ಎಂದು ಶುಕ್ರವಾರ ಮೋದಿ ಟ್ವೀಟ್ ಮಾಡಿದ್ದರು. ಜತೆಗೆ, ಯೋಧರಿಗೆ ಸಂಬಂಧಿಸಿದ ವಿಡಿಯೊವೊಂದನ್ನೂ ಹಂಚಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.