ADVERTISEMENT

ಕಾರ್ಗಿಲ್‌ನಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಅಕ್ಟೋಬರ್ 2022, 7:05 IST
Last Updated 24 ಅಕ್ಟೋಬರ್ 2022, 7:05 IST
ಸೇನಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (ಚಿತ್ರಕೃಪೆ: Twitter / @PMOIndia)
ಸೇನಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (ಚಿತ್ರಕೃಪೆ: Twitter / @PMOIndia)   

ನವದೆಹಲಿ: ಯೋಧರೊಂದಿಗೆ ದೀಪಾವಳಿ ಸಂಭ್ರಮ ಆಚರಿಸುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಕಾರ್ಗಿಲ್‌ಗೆ ಆಗಮಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಟ್ವೀಟ್‌ ಮಾಡಿದೆ. 'ಪ್ರಧಾನಿ ಮೋದಿ ಅವರು ಕಾರ್ಗಿಲ್‌ ತಲುಪಿದ್ದಾರೆ. ಅಲ್ಲಿ ಅವರುನಮ್ಮ ಕೆಚ್ಚೆದೆಯ ಯೋಧರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ' ಎಂದು ತಿಳಿಸಿದೆ.

2014ರಲ್ಲಿ ಅಧಿಕಾರಕ್ಕೇರಿದಾಗಿನಿಂದಲೂ ಪ್ರಧಾನಿ ಮೋದಿ ಅವರು ಪ್ರತಿವರ್ಷದೀಪಾವಳಿ ಆಚರಿಸಲು ಸೇನೆಯ ವಿವಿಧ ನೆಲೆಗಳಿಗೆ ಭೇಟಿ ನೀಡುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.