ADVERTISEMENT

ಆ.7ಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ

ಪಿಟಿಐ
Published 5 ಆಗಸ್ಟ್ 2022, 13:08 IST
Last Updated 5 ಆಗಸ್ಟ್ 2022, 13:08 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ನೀತಿ ಆಯೋಗದ ಏಳನೇ ಆಡಳಿತ ಮಂಡಳಿ ಸಭೆ ಆ.7ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಇದು ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಯೋಗದ ಹೊಸ ಯುಗಕ್ಕೆ ನಾಂದಿ ಹಾಡಲಿದೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಆಯೋಗದ ಸದಸ್ಯರು ಹಾಗೂ ಮುಖ್ಯಮಂತ್ರಿಗಳಿಗೆ2019ರ ಜುಲೈ ನಂತರ ಇದು ಮೊದಲ ಭೌತಿಕ ಸಭೆಯಾಗಿದೆ.

ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆಯಲಿರುವ ಸಭೆಯ ಕಾರ್ಯಸೂಚಿಯಲ್ಲಿ ಬೆಳೆ ವೈವಿಧ್ಯೀಕರಣ ಮತ್ತು ಎಣ್ಣೆಕಾಳು, ಬೇಳೆ ಕಾಳು, ಕೃಷಿ ಸಮುದಾಯದಲ್ಲಿ ಸ್ವಾವಲಂಬನೆ ಸಾಧಿಸುವುದು, ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಒಳಗೊಂಡಿದೆ.

ADVERTISEMENT

ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷದ ಹಿನ್ನೆಲೆಯಲ್ಲಿರಾಜ್ಯಗಳು ಸ್ವಾವಲಂಬಿಗಳಾಗಿ ‘ಆತ್ಮನಿರ್ಭರ್ ಭಾರತ್’ ಕಡೆಗೆ ಚಲಿಸುವ ಅವಶ್ಯಕತೆಯಿದೆ. ಸ್ಥಿರ, ಸುಸ್ಥಿರ ಭಾರತ ನಿರ್ಮಿಸುವ ನಿಟ್ಟಿನಲ್ಲಿ ಸಭೆ ನಡೆಯಲಿದೆ. ಕೇಂದ್ರ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ನಡುವಿನ ಸಹಯೋಗ ಮತ್ತು ಸಹಕಾರದ ಹೊಸ ಯುಗದ ಕಡೆಗೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿಕೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.