ADVERTISEMENT

ಇಸಿಒಎಸ್‌ಒಸಿ: ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಭಾಷಣ

ಪಿಟಿಐ
Published 15 ಜುಲೈ 2020, 7:21 IST
Last Updated 15 ಜುಲೈ 2020, 7:21 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಅಂಗ ಸಂಸ್ಥೆಯಾದ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯ (ಇಸಿಒಎಸ್‌ಒಸಿ) ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಅವರು ಶುಕ್ರವಾರ ಮಾತನಾಡಲಿದ್ದಾರೆ. ಭದ್ರತಾ ಮಂಡಳಿಯಲ್ಲಿ ತಾತ್ಕಾಲಿಕ ಸದಸ್ಯ ರಾಷ್ಟ್ರವಾಗಿ ಭಾರತ ಆಯ್ಕೆ ಆದ ಬಳಿಕ ಇದೇ ಮೊದಲ ಬಾರಿಗೆ ಇಂತಹ ಐತಿಹಾಸಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ಅವಕಾಶ ಒದಗಿ ಬಂದಿದೆ.

ಶುಕ್ರವಾರ ಆನ್‌ಲೈನ್‌ ಮೂಲಕ ನಡೆಯಲಿರುವ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಈ ವೇಳೆವಿಶ್ವಸಂಸ್ಥೆಯ 75ನೇ ವಾರ್ಷಿಕೋತ್ಸವದಲ್ಲಿ ಕೋವಿಡ್‌–19ನಿಂದಾಗಿ ಎದುರಾಗಿರುವ ಸಮಸ್ಯೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು, ಅಪೌಷ್ಟಿಕತೆ ಸಮಸ್ಯೆ ನಿವಾರಣೆಗೆ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂಬುದರ ಬಗ್ಗೆ ಚರ್ಚೆ ನಡೆಯಲಿದೆ.

ಈ ಬಗ್ಗೆಪ್ರಧಾನಿ ನರೇಂದ್ರ ಮೋದಿ ಮತ್ತುನಾರ್ವೇಜಿಯನ್‌ ಪ್ರಧಾನಿಎರ್ನಾ ಸೋಲ್ಬರ್ಗ್ ಹಾಗೂ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಮಾತನಾಡಲಿದ್ದಾರೆ.

ADVERTISEMENT

ಈ ಶೃಂಗಸಭೆಯಲ್ಲಿ ಉನ್ನತ ಮಟ್ಟದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಇದರಲ್ಲಿ ಸರ್ಕಾರಿ, ಖಾಸಗಿ, ಅಕಾಡೆಮಿಕ್‌ ವಲಯದ ಪ್ರತಿನಿಧಿಗಳು ಭಾಗವಹಿಸುತ್ತಾರೆ.2016ರಲ್ಲಿಇಸಿಒಎಸ್‌ಒಸಿಯ 70ನೇ ವಾರ್ಷಿಕೋತ್ಸವದಲ್ಲೂ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.