ADVERTISEMENT

ಗುಜರಾತ್‌: ನೂತನ ಸರ್ಕ್ಯೂಟ್ ಹೌಸ್ ಉದ್ಘಾಟಿಸಲಿರುವ ಪ್ರಧಾನಿ

ಪಿಟಿಐ
Published 20 ಜನವರಿ 2022, 15:22 IST
Last Updated 20 ಜನವರಿ 2022, 15:22 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಗುಜರಾತ್‌ನ ಸೋಮನಾಥ ದೇವಸ್ಥಾನದ ಬಳಿಯಲ್ಲಿ ನಿರ್ಮಾಣ ಮಾಡಲಾಗಿರುವ ನೂತನ ಸರ್ಕ್ಯೂಟ್ ಹೌಸ್ ಅನ್ನುಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

‘ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಅವರು ನೂತನ ಸರ್ಕ್ಯೂಟ್‌ ಹೌಸ್‌ ಉದ್ಘಾಟಿಸಲಿದ್ದಾರೆ. ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಸ್ತಿತ್ವದಲ್ಲಿರುವ ಸರ್ಕಾರಿ ಸೌಲಭ್ಯವು ದೇವಸ್ಥಾನದಿಂದ ದೂರದಲ್ಲಿರುವುದರಿಂದ ಹೊಸ ಸರ್ಕ್ಯೂಟ್ ಹೌಸ್‌ ಅನ್ನು ಕಟ್ಟಲಾಗಿದೆ. ಇದಕ್ಕಾಗಿ ₹30 ಕೋಟಿ ವೆಚ್ಚವಾಗಿದೆ’ಎಂದು ಪ್ರಧಾನಿ ಕಚೇರಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT