ADVERTISEMENT

ಸ್ವಾತಂತ್ರ್ಯೋತ್ಸವ ಸಮಾರಂಭಕ್ಕೆ ಒಲಿಂಪಿಕ್ಸ್ ತಂಡಕ್ಕೆ ಆಹ್ವಾನ ನೀಡಲಿರುವ ಮೋದಿ

ಪಿಟಿಐ
Published 3 ಆಗಸ್ಟ್ 2021, 11:30 IST
Last Updated 3 ಆಗಸ್ಟ್ 2021, 11:30 IST
ಪ್ರಧಾನಿ ನರೇಂದ್ರ ಮೋದಿ (ಪಿಟಿಐ ಚಿತ್ರ)
ಪ್ರಧಾನಿ ನರೇಂದ್ರ ಮೋದಿ (ಪಿಟಿಐ ಚಿತ್ರ)   

ನವದೆಹಲಿ: ಸ್ವಾತಂತ್ರ್ಯೋತ್ಸವ ಪ್ರಯುಕ್ತ ಆಗಸ್ಟ್ 15ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಸಮಾರಂಭಕ್ಕೆ ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಿರುವವರನ್ನು ವಿಶೇಷ ಅತಿಥಿಗಳನ್ನಾಗಿ ಆಹ್ವಾನಿಸಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ.

ಒಲಿಂಪಿಕ್ಸ್‌ ತಂಡವನ್ನು ಸಂವಾದಕ್ಕಾಗಿ ತಮ್ಮ ನಿವಾಸಕ್ಕೂ ಪ್ರಧಾನಿಯವರು ಆಹ್ವಾನಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

120 ಅಥ್ಲೀಟ್‌ಗಳೂ ಸೇರಿದಂತೆ ಒಟ್ಟು 228 ಮಂದಿ ಭಾರತದಿಂದ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದಾರೆ.

ADVERTISEMENT

ಒಲಿಂಪಿಕ್ಸ್‌ಗೆ ತೆರಳುವ ಮುನ್ನ ಅಥ್ಲೀಟ್‌ಗಳ ಬಳಿ ಸಂವಾದ ನಡೆಸಿದ್ದ ಮೋದಿ, ಸದಾ ಕ್ರೀಡಾಳುಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.