ADVERTISEMENT

‘ತೌಕ್ತೆ’ ಚಂಡಮಾರುತ: ಸಿದ್ಧತೆ ಪರಿಶೀಲಿಸಲಿರುವ ಪ್ರಧಾನಿ

ಪಿಟಿಐ
Published 15 ಮೇ 2021, 5:23 IST
Last Updated 15 ಮೇ 2021, 5:23 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ‘ತೌಕ್ತೆ’ ಚಂಡಮಾರುತವನ್ನು ಎದುರಿಸಲು ನಡೆದಿರುವ ಸಿದ್ಧತೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್‌) ಹಿರಿಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಅರಬ್ಬಿ ಸಮದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದೇ 17ರಂದು ತೀವ್ರ ಚಂಡಮಾರುತ ಎದುರಾಗುವ ಸಾಧ್ಯತೆ ಇದೆ. ಅದು ಒಂದು ದಿನದ ಬಳಿಕ ಗುಜರಾತ್‌ ಕರಾವಳಿಯನ್ನು ದಾಟಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮುನ್ಸೂಚನೆ ನೀಡಿದೆ.

ADVERTISEMENT

ಚಂಡಮಾರುತವು ಶನಿವಾರ ಬೆಳಿಗ್ಗೆಯಿಂದಲೇ ಪ್ರಬಲಗೊಳ್ಳಲಿದ್ದು, ಶನಿವಾರ ರಾತ್ರಿ ವೇಳೆಗೆ ಭಾರಿ ಮಳೆ ಸುರಿಸುತ್ತದೆ ಎಂದು ಐಎಂಡಿ ತಿಳಿಸಿದೆ.

ತೌಕ್ತೆ ಚಂಡಮಾರುತದ ಪರಿಣಾಮಗಳನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು (ಎನ್‌ಡಿಆರ್‌ಎಫ್‌) ಈಗಾಗಲೇ ತನ್ನ 53 ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.