ADVERTISEMENT

ಕೇದಾರನಾಥ, ಬದರಿನಾಥ ಕ್ಷೇತ್ರಕ್ಕೆ ಇಂದು ಮೋದಿ ಭೇಟಿ: ಹಲವು ಯೋಜನೆಗಳಿಗೆ ಚಾಲನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಅಕ್ಟೋಬರ್ 2022, 2:47 IST
Last Updated 21 ಅಕ್ಟೋಬರ್ 2022, 2:47 IST
ಕೇದಾರನಾಥ –ಸಾಂದರ್ಭಿಕ ಚಿತ್ರ (ಪಿಟಿಐ)
ಕೇದಾರನಾಥ –ಸಾಂದರ್ಭಿಕ ಚಿತ್ರ (ಪಿಟಿಐ)   

ಡೆಹ್ರಾಡೂನ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) ಉತ್ತರಾಖಂಡದ ಕೇದಾರನಾಥ ಮತ್ತು ಬದರಿನಾಥಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.

ಗೌರಿಕುಂಡ್‌–ಕೇದಾರನಾಥ ನಡುವೆ9.7 ಕಿ.ಮೀ ಉದ್ದದಹೊಸ ರೋಪ್‌ ವೇ ಯೋಜನೆ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ₹3400 ಕೋಟಿಗೂ ಹೆಚ್ಚು ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ವರದಿಯಾಗಿದೆ.

ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳನ್ನು ಹೂವಿನಿಂದ ಅಲಂಕರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ರಸ್ತೆ ವಿಸ್ತರಣೆ ಮತ್ತು ರೋಪ್‌ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಜನರನ್ನು ಉದ್ದೇಶಿಸಿ ಮೋದಿ
ಮಾತನಾಡಲಿದ್ದಾರೆ.

ಪ್ರಧಾನಿ ಮೋದಿಯವರ ಕೇದಾರನಾಥ-ಬದರಿನಾಥ ಭೇಟಿ ಉತ್ತರಾಖಂಡದ ಅಭಿವೃದ್ಧಿಯಲ್ಲಿ ಒಂದು ಮೈಲಿಗಲ್ಲು ಎಂದು ಸಾಬೀತುಪಡಿಸಲಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.