ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 104ನೆ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಗೌರವ ಸಲ್ಲಿಸಿದ್ದಾರೆ.
ಗುರುವಾರ ಬೆಳಿಗ್ಗೆ ಸೋನಿಯಾ ಗಾಂಧಿ, ರಾಹುಲ್ ಅವರು ದೆಹಲಿಯ ಶಕ್ತಿ ಸ್ಥಳದಲ್ಲಿರುವ ಇಂದಿರಾ ಗಾಂಧಿಯವರ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.
ಟ್ವಿಟರ್‌ನಲ್ಲಿ ನಮನ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದಂದು ಅವರಿಗೆ ನಮಸ್ಕಾರಗಳು’ ಎಂದು ಬರೆದುಕೊಂಡಿದ್ದಾರೆ.
ಇಂದಿರಾ ಜನ್ಮ ದಿನಾಚರಣೆ ಹಿನ್ನೆಲೆ ದೇಶದ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಗೌರವ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.