ADVERTISEMENT

2019ರಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕೆ ಖರ್ಚಾಗಿದ್ದು ಎಷ್ಟು?

ಪಿಟಿಐ
Published 2 ಫೆಬ್ರುವರಿ 2023, 14:22 IST
Last Updated 2 ಫೆಬ್ರುವರಿ 2023, 14:22 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 2019ರಿಂದ ಕೈಗೊಂಡಿರುವ ವಿದೇಶ ಪ್ರವಾಸದ ಲೆಕ್ಕದ ಕುರಿತು ಕೇಂದ್ರ ಸರ್ಕಾರ ಗುರುವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.

ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ವಿ. ಮುರಳೀಧರನ್ ಅವರು ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ 2019ರಿಂದ 21 ವಿದೇಶ ಪ್ರವಾಸಗಳನ್ನು ಕೈಗೊಂಡಿದ್ದಾರೆ. ಈ ಪ್ರವಾಸಕ್ಕೆ ₹22.76 ಕೋಟಿ ಖರ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಪ್ರಧಾನಿ ಮೋದಿ ಅವರು ಈ ಅವಧಿಯಲ್ಲಿ ಜಪಾನ್‌ಗೆ ಮೂರು, ಅಮೆರಿಕ ಮತ್ತು ಯುಎಇಗೆ ತಲಾ ಎರಡು ಬಾರಿ ಭೇಟಿ ಕೊಟ್ಟಿದ್ದಾರೆ.

ಈ ಅವಧಿಯಲ್ಲಿ ರಾಷ್ಟ್ರಪತಿ ಎಂಟು ವಿದೇಶ ಪ್ರವಾಸಗಳನ್ನು ಕೈಗೊಂಡಿದ್ದು, ಈ ಪ್ರವಾಸಗಳಿಗೆ ₹6.24 ಕೋಟಿ ವೆಚ್ಚವಾಗಿದೆ. ಈ ಎಂಟು ಪ್ರವಾಸಗಳ ಪೈಕಿ ಏಳು ಪ್ರವಾಸಗಳನ್ನು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೈಗೊಂಡಿದ್ದರು. ದ್ರೌಪದಿ ಮುರ್ಮು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬ್ರಿಟನ್‌ಗೆ ಭೇಟಿ ಕೊಟ್ಟಿದ್ದರು.

ಇನ್ನು ವಿದೇಶಾಂಗ ಸಚಿವ ಎಸ್ ಜೈಶಂಕರ್, 2019ರಿಂದ 86 ವಿದೇಶ ಪ್ರವಾಸಗಳನ್ನು ಕೈಗೊಂಡಿದ್ದು, ಈ ಭೇಟಿಗಳಿಗೆ ₹20.87 ಕೋಟಿ ವೆಚ್ಚವಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.