ADVERTISEMENT

ಕೋವಿಡ್ ಲಸಿಕೆ: ಪುಣೆಯ ಸೆರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾಗೆ ಪ್ರಧಾನಿ ಭೇಟಿ

ಏಜೆನ್ಸೀಸ್
Published 28 ನವೆಂಬರ್ 2020, 14:15 IST
Last Updated 28 ನವೆಂಬರ್ 2020, 14:15 IST
ಸೆರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ ಸಂಸ್ಥೆಯಲ್ಲಿ ಕೋವಿಡ್‌ ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿರುವ ತಂಡದೊಂದಿಗೆ ಸಂವಾದ ನಡೆಸಿದ ಮೋದಿ
ಸೆರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ ಸಂಸ್ಥೆಯಲ್ಲಿ ಕೋವಿಡ್‌ ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿರುವ ತಂಡದೊಂದಿಗೆ ಸಂವಾದ ನಡೆಸಿದ ಮೋದಿ    

ಪುಣೆ: ಇಲ್ಲಿನ ಸೆರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ ಸಂಸ್ಥೆಗೆ ಶನಿವಾರ ಭೇಟಿ ನೀಡಿರುವ ಪ್ರಧಾನಿ ಮೋದಿ ಕೊರೊನಾ ಸೋಂಕಿನ ವಿರುದ್ಧ ಅಭಿವೃದ್ಧಿಪಡಿಸಲಾಗುತ್ತಿರುವ ಕೋವಿಡ್‌ ಲಸಿಕೆಯ ಪ್ರಗತಿ ಪರಿಶೀಲನೆ ಮಾಡಿದ್ದಾರೆ.

ಈ ವೇಳೆ ಸೆರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ ಸಂಸ್ಥೆಯಲ್ಲಿ ಕೋವಿಡ್‌ ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿರುವ ತಂಡದೊಂದಿಗೆ ಸಂವಾದ ನಡೆಸಿರುವುದಾಗಿ ಮೋದಿ ತಿಳಿಸಿದ್ದಾರೆ.

ಈ ಬಗ್ಗೆ ಶನಿವಾರ ಸಂಜೆ ಟ್ವೀಟ್‌ ಮಾಡಿರುವ ಅವರು, 'ಸೆರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ ಸಂಸ್ಥೆಯಲ್ಲಿ ಕೋವಿಡ್‌ ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿರುವ ತಂಡದೊಂದಿಗೆ ಸಂವಾದ ನಡೆಸಿದ್ದೇನೆ. ಲಸಿಕೆ ತಯಾರಿಕೆಯಲ್ಲಿ ಈ ವರೆಗೂ ಸಾಧಿಸಿರುವ ಪ್ರಗತಿಯ ಬಗ್ಗೆ ಅವರು ಹಂಚಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಲಸಿಕೆ ತಯಾರಿಕೆಯ ವೇಗವನ್ನು ಹೆಚ್ಚಿಸಲು ಯಾವ ರೀತಿಯಲ್ಲಿ ಯೋಜನೆ ರೂಪಿಸಿದ್ದಾರೆ ಎಂಬುದರ ಬಗ್ಗೆ ವಿವರಗಳನ್ನು ನೀಡಿದ್ದಾರೆ. ಅವರ ಉತ್ಪದನಾ ಸಾಮರ್ಥ್ಯದ ಬಗ್ಗೆಯೂ ತಿಳಿದುಕೊಂಡೆ' ಎಂದು ಹೇಳಿದ್ದಾರೆ.

ADVERTISEMENT

ಪುಣೆಗೆ ತೆರಳುವುದಕ್ಕೂ ಮುನ್ನ ಅಹಮದಾಬಾದ್‌ನ ಜೈಡಸ್‌ ಕ್ಯಾಡಿಲಾ ಸಂಸ್ಥೆಯ ಉತ್ಪಾದನಾ ಘಟಕ ಮತ್ತು ಹೈದರಾಬಾದ್ ಭಾರತ್ ಬಯೋಟೆಕ್ ಘಟಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.

ಇದನ್ನೂ ಓದಿ...

ಕೊರೊನಾ ಸೋಂಕು ವಿರುದ್ಧದ ಲಸಿಕೆಯ ಬಿಡುಗಡೆಗೆ ಮುನ್ನ ಅದರ ಉತ್ಪಾದನೆ ಮತ್ತು ವಿತರಣಾ ವ್ಯವಸ್ಥೆಯ ಕುರಿತು ಮಾಹಿತಿ ಪಡೆಯುವ ಕ್ರಮವಾಗಿ ಪ್ರಧಾನಿ ಮೋದಿ ಈ ಭೇಟಿ ಹಮ್ಮಿಕೊಂಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.