ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ದೇಶದ ನಾಗರಿಕರಿಗೆ ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ.
ಬೆಳಕಿನ ಹಬ್ಬವು ಸಂತೋಷ ಮತ್ತು ಯೋಗಕ್ಷೇಮವನ್ನು ತರಲಿ ಎಂದು ಹಾರೈಸಿದ್ದಾರೆ.
’ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ದೀಪಾವಳಿಯು ಹೊಳಪು ಮತ್ತು ಕಾಂತಿಯೊಂದಿಗೆ ಸಂಬಂಧ ಹೊಂದಿದೆ. ಈ ಮಂಗಳಕರ ಹಬ್ಬವು ನಮ್ಮ ಜೀವನದಲ್ಲಿ ಸಂತೋಷ. ಯೋಗಕ್ಷೇಮ, ಉತ್ಸಾಹವನ್ನು ಹೆಚ್ಚಿಸಲಿ. ಕುಟುಂಬಸ್ಥರು ಮತ್ತು ಸ್ನೇಹಿತರೊಂದಿಗೆ ನೀವೆಲ್ಲರೂ ಸಂಭ್ರಮದ ದೀಪಾವಳಿ ಆಚರಿಸುವಿರಿ ಎಂದು ನಾನು ಭಾವಿಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.