ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿರುವ ಶ್ರೀಶೈಲಂನ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಶ್ರೀಶೈಲಂ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿರುವ ಶ್ರೀಶೈಲಂನ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಪ್ರಧಾನಿ ಅವರಿಗೆ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಅವರು ಸಾಥ್ ನೀಡಿದರು.
ಮೋದಿ ಅವರು ಬೆಳಿಗ್ಗೆ ದೇವಸ್ಥಾನಕ್ಕೆ ತೆರಳಿ ಮಲ್ಲಿಕಾರ್ಜುನ ಸ್ವಾಮಿ ಸನ್ನಿಧಿಯಲ್ಲಿ ಪಂಚಾಮೃತದೊಂದಿಗೆ ವಿಶೇಷ ರುದ್ರಾಭಿಷೇಕ ಪೂಜೆ ನೆರವೇರಿಸಿದರು.
ದೇಶದಲ್ಲಿರುವ 12 ಜ್ಯೋತೀರ್ಲಿಂಗಗಳಲ್ಲಿ ಮಲ್ಲಿಕಾರ್ಜುನ ಸ್ವಾಮಿ ದೇವಾಲಯವೂ ಒಂದು.
ಇದೇ ವೇಳೆ ಮೋದಿ ಅವರು ದೇವಾಲಯದ ಆವರಣದಲ್ಲಿ ನಿರ್ಮಿಸಿರುವ ಶಿವಾಜಿ ಸ್ಫೂರ್ತಿ ಕೇಂದ್ರಕ್ಕೆ ತೆರಳಿ ಧ್ಯಾನ ಮಾಡಿದರು. 1677ರಲ್ಲಿ ಮರಾಠ ದೊರೆ ಶಿವಾಜಿ ಅವರು ಈ ದೇವಸ್ಥಾನಕ್ಕೆ ಭೇಟಿ ನೀಡಿದ ಸ್ಮರಣಾರ್ಥ ಸ್ಫೂರ್ತಿ ಕೇಂದ್ರ ನಿರ್ಮಿಸಲಾಗಿದೆ.
ಕರ್ನೂಲ್ ಜಿಲ್ಲೆಯಲ್ಲಿ ಇಂದು ಆಂಧ್ರ ಸರ್ಕಾರದಿಂದ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮೋದಿ ಅವರು ಆಂಧ್ರ ಭೇಟಿ ಕೈಗೊಂಡಿದ್ದಾರೆ.
ದೇವಸ್ಥಾನಕ್ಕೂ ತೆರಳುವ ಮುನ್ನ ಕರ್ನೂಲ್ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಸಿಎಂ ನಾಯ್ಡು, ಡಿಸಿಎಂ ಸೇರಿದಂತೆ ಹಲವು ಗಣ್ಯರು ಬರಮಾಡಿಕೊಂಡರು.
ಜಿಎಸ್‌ಟಿ ಕಡಿತದ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿಸಲು ಆಂಧ್ರ ಸರ್ಕಾರ ಕೈಗೊಂಡಿರುವ ವಿಶೇಷ ಅಭಿಯಾನವನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.