ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಮೊದಲ ವರ್ಷದ ಪುಣ್ಯತಿಥಿ ಅಂಗವಾಗಿ ಶುಕ್ರವಾರ ಬಿಜೆಪಿ ಪಕ್ಷದ ವತಿಯಿಂದ ಗೌರವ ಸಲ್ಲಿಸಲಾಯಿತು.
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ‘ಸದೈವ್ ಅಟಲ್’ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು.
ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಚಿವರಾದ ಪ್ರಹ್ಲಾದ ಜೋಶಿ, ಜೆ.ಪಿ. ನಾಡ್ಡಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.