ADVERTISEMENT

ಸುಭಾಷ್ ಚಂದ್ರ ಬೋಸ್, ಬಾಳಾ ಠಾಕ್ರೆ ಜನ್ಮ ಜಯಂತಿ: ಪ್ರಧಾನಿ ಮೋದಿಯಿಂದ ಗೌರವ

ಪಿಟಿಐ
Published 23 ಜನವರಿ 2021, 4:56 IST
Last Updated 23 ಜನವರಿ 2021, 4:56 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಸ್ ಚಂದ್ರ ಬೋಸ್ ಹಾಗೂ ಪ್ರಖರ ಹಿಂದುತ್ವವಾದಿ ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಅವರ ಜನ್ಮ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅವರಿಗೆ ಗೌರವ ಸಲ್ಲಿಸಿದರು.

ಬೋಸ್ ಅವರ 125ನೇ ಜಯಂತಿ ದಿನವಾದ ಇಂದು (ಜ.23) ಪ್ರಥಮ ‘ಪರಾಕ್ರಮ ದಿವಸ್’ ಕಾರ್ಯಕ್ರಮ ಕೋಲ್ಕತ್ತದಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಮಾತನಾಡಲಿದ್ದಾರೆ.

'ಮಹಾ ಸ್ವಾತಂತ್ರ್ಯ ಹೋರಾಟಗಾರ ಮತ್ತು ಭಾರತ ಮಾತೆಯ ನಿಜವಾದ ಪುತ್ರ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯಂದು ಗೌರವ ಸಲ್ಲಿಸುತ್ತೇನೆ' ಎಂದು ಪ್ರಧಾನಿ, ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ADVERTISEMENT

'ಅವರಿಗೆ ಕೃತಜ್ಞವಾಗಿರುವ ದೇಶ, ಸ್ವಾತಂತ್ರ್ಯಕ್ಕಾಗಿ ಅವರ ತ್ಯಾಗ ಮತ್ತು ಸಮರ್ಪಣೆಯನ್ನು ಯಾವಾಗಲೂ ನೆನಪಿಸಿಕೊಳ್ಳುತ್ತದೆ' ಎಂದು ಹೇಳಿದ್ದಾರೆ.

1897 ರಲ್ಲಿ ಈ ದಿನ ಜನಿಸಿದ ಬೋಸ್ಅವರ ಜನ್ಮದಿನಾಚರಣೆಯ ನೆನಪಿಗಾಗಿ ಜನವರಿ 23 ಅನ್ನು 'ಪರಾಕ್ರಮ ದಿವಸ್' ಎಂದು ಆಚರಿಸಲು ಸರ್ಕಾರ ನಿರ್ಧರಿಸಿದೆ.

ಬಾಳಾ ಠಾಕ್ರೆಗೆ ಗೌರವ ಸಲ್ಲಿಸಿದ ಪ್ರಧಾನಿ

ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಅವರು ತಮ್ಮ ಆದರ್ಶಗಳನ್ನು ಎತ್ತಿಹಿಡಿಯುವಲ್ಲಿ ಅಚಲರಾಗಿದ್ದರು ಎಂದು ಹೇಳಿದ್ದಾರೆ.

1926 ರಲ್ಲಿ ಜನಿಸಿದ ಠಾಕ್ರೆ ಅವರು ಶಿವಸೇನೆ ಅನ್ನು ಸ್ಥಾಪಿಸಿದರು, 'ಮರಾಠಿ ಮಾನೂಸ್' ಆಗಿದ್ದ ಶಿವಸೇನೆಯು ನಂತರ ಹಿಂದೂ ರಾಷ್ಟ್ರೀಯತೆಯನ್ನು ಸ್ವೀಕರಿಸಿತು.

ಬಾಳ ಸಾಹೇಬ್ ಠಾಕ್ರೆ ಜಿ ಅವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರ ಆದರ್ಶಗಳನ್ನು ಎತ್ತಿಹಿಡಿಯುವ ವಿಚಾರದಲ್ಲಿ ಅವರು ಅಚಲವಾಗಿದ್ದರು. ಜನರ ಕಲ್ಯಾಣಕ್ಕಾಗಿ ಅವರು ದಣಿವರಿಯದೆ ಶ್ರಮಿಸಿದ್ದಾರೆ ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.