ADVERTISEMENT

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಬಗ್ಗೆ ಪ್ರಧಾನಿ ನಿಲುವು ತಿಳಿಸಲಿ: ಠಾಕ್ರೆ

ಪಿಟಿಐ
Published 10 ಡಿಸೆಂಬರ್ 2022, 14:33 IST
Last Updated 10 ಡಿಸೆಂಬರ್ 2022, 14:33 IST
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ   

ಜಲ್ನಾ (ಮಹಾರಾಷ್ಟ್ರ): ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವಿನ ಗಡಿ ಸಮಸ್ಯೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನಾದ ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ.

ಜಲ್ನಾ ಜಿಲ್ಲೆಯ ಸಂತ ರಾಮದಾಸ್ ಕಾಲೇಜಿನಲ್ಲಿ ನಡೆದ 42ನೇ ಮರಾಠವಾಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಅವರು ಭಾನುವಾರ ನಾಗ್ಪುರ– ಮುಂಬೈ ಎಕ್ಸ್‌ಪ್ರೆಸ್ ವೇ ಉದ್ಘಾಟನೆಗೆ ಬರುತ್ತಿದ್ದಾರೆ. ಅವರನ್ನು ನಾವು ಸ್ವಾಗತಿಸುತ್ತೇವೆ. ಭೇಟಿ ವೇಳೆ ಅವರು ಕರ್ನಾಟಕ– ಮಹಾರಾಷ್ಟ್ರ ನಡುವಿನ ಗಡಿಯ ಸಮಸ್ಯೆ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು’ ಎಂದರು.

‘ಮಹಾರಾಷ್ಟ್ರದ ಕೆಲವು ಹಳ್ಳಿಗಳ ಮೇಲೆ ಹಕ್ಕು ಸಾಧಿಸುತ್ತಿರುವ ಕರ್ನಾಟಕ ಮುಖ್ಯಮಂತ್ರಿಯ ಕುರಿತೂ ಪ್ರಧಾನಿ ಅವರು ಮಾತನಾಡಬೇಕು’ ಎಂದು ಹೇಳಿದರು.

ADVERTISEMENT

ನ್ಯಾಯಮೂರ್ತಿಗಳ ನೇಮಕಕ್ಕಾಗಿ ಇರುವ ಕೊಲಿಜಿಯಂ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಠಾಕ್ರೆ, ಬಿಜೆಪಿಯು ನ್ಯಾಯಾಂಗ ವ್ಯವಸ್ಥೆಯ ಮೇಲೆ ಒತ್ತಡ ಹೇರುತ್ತಿದೆ ಹಾಗೂ ಅದನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳಲು ಯತ್ನಿಸುತ್ತಿದೆ ಎಂದೂ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.