ADVERTISEMENT

ಬ್ಯಾಲೆಟ್ ಪೇಪರ್ ಬಗ್ಗೆ ಟ್ರಂಪ್ ಹೇಳಿಕೆ ಬಗ್ಗೆಯೂ ಗಮನ ಕೊಡಿ: ಮೋದಿಗೆ ಕಾಂಗ್ರೆಸ್

ಪಿಟಿಐ
Published 22 ಫೆಬ್ರುವರಿ 2025, 12:38 IST
Last Updated 22 ಫೆಬ್ರುವರಿ 2025, 12:38 IST
<div class="paragraphs"><p>ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್</p></div>

ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್

   

(ರಾಯಿಟರ್ಸ್ ಚಿತ್ರ)

ನವದೆಹಲಿ: ಮತ ಚಲಾವಣೆಗೆ ಮತಯಂತ್ರಗಳ ಬದಲು ಬ್ಯಾಲೆಟ್ ಪೇಪರ್ ಬಳಕೆ ಕುರಿತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯ ಬಗ್ಗೆಯೂ ಸ್ನೇಹಿತರಾಗಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಗಮನ ಕೊಡಬೇಕು ಎಂದು ಕಾಂಗ್ರೆಸ್ ಇಂದು (ಶನಿವಾರ) ಹೇಳಿದೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, 'ಬ್ಯಾಲೆಟ್ ಪೇಪರ್ ಹಾಗೂ ಅದೇ ದಿನ ಮತದಾನ ಕುರಿತು ತಮ್ಮ ಆತ್ಮೀಯ ಸ್ನೇಹಿತ ಡೊನಾಲ್ಡ್ ಟ್ರಂಪ್ ನೀಡಿರುವ ಸಂದೇಶಕ್ಕೆ ಪ್ರಧಾನಿ ಮೋದಿ ಗಮನ ಕೊಡುತ್ತಾರೆಯೇ? ಚುನಾವಣಾ ಪ್ರಕ್ರಿಯೆಯ ಸಮಗ್ರತೆ ಕುರಿತು ಇಡೀ ದೇಶದ ಕಳವಳವನ್ನು ಪರಿಹರಿಸುತ್ತಾರೆಯೇ ?' ಎಂದು ಪ್ರಶ್ನಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಹೇಳಿಕೆ ಸಂಬಂಧ 'ಎಕನಾಮಿಕ್ ಟೈಮ್ಸ್' ವರದಿ ಹಂಚಿಕೊಂಡಿರುವ ವೇಣುಗೋಪಾಲ್, 'ಮಹಾರಾಷ್ಟ್ರದಲ್ಲಿ ಲಕ್ಷಗಟ್ಟಲೆ ಮತದಾರರ ಅಸಹಜ ಹೆಚ್ಚಳ ಮತ್ತು ವಿರೋಧ ಪಕ್ಷಗಳ ಮತಗಳನ್ನು ಅಳಿಸಿ ಹಾಕಿರುವುದರ ಕುರಿತಾಗಿಯೂ ಅವರ ಆಪ್ತ ಮಿತ್ರ ದಿಗ್ಭ್ರಮೆ ವ್ಯಕ್ತಪಡಿಸಿರುವ ಕುರಿತು ನಮಗೆ ಖಾತ್ರಿಯಿದೆ' ಎಂದು ಹೇಳಿದ್ದಾರೆ.

'ಇಡೀ ಜಗತ್ತಿಗೆ ಸ್ಪಷ್ಟವಾಗಿ ಗೋಚರಿಸುವ ವಿಷಯವನ್ನು ಬಿಜೆಪಿ ಕಡೆಗಣಿಸುತ್ತಿರುವುದು ದುರಂತದ ಸಂಗತಿಯಾಗಿದೆ. ಚುನಾವಣಾ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುವ ಹಾಗೂ ಪಾರದರ್ಶಕತೆಯಿಂದ ಪಲಾಯನಗೈಯುವ ಬಿಜೆಪಿಯ ವರ್ತನೆಯು ನಮ್ಮ ಅನುಮಾನಗಳನ್ನು ದೃಢಪಡಿಸುತ್ತದೆ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.