ADVERTISEMENT

ಆಕ್ಸಿಜನ್‌ ಸ್ಥಿತಿಗತಿ ಕುರಿತು ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಪಿಟಿಐ
Published 9 ಜುಲೈ 2021, 5:17 IST
Last Updated 9 ಜುಲೈ 2021, 5:17 IST
   

ನವದೆಹಲಿ: ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಲಭ್ಯತೆ ಮತ್ತು ಪೂರೈಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ‘ಉನ್ನತ ಮಟ್ಟ‘ದ ಅಧಿಕಾರಿಗಳು, ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಏಪ್ರಿಲ್-ಮೇ ತಿಂಗಳಲ್ಲಿ ಕೋವಿಡ್‌–19 ಎರಡನೇ ಅಲೆ ತೀವ್ರವಾದಾಗ, ದೇಶದ ವಿವಿಧ ಭಾಗಗಳಲ್ಲಿರುವ ಆಸ್ಪತ್ರೆಗಳಲ್ಲಿವೈದ್ಯಕೀಯ ಆಮ್ಲಜನಕದ ಕೊರತೆ ಇರುವುದಾಗಿ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಗಳೊಂದಿಗೆ ಸಮನ್ವಯ ಸಾಧಿಸಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆ ಮತ್ತು ಪೂರೈಕೆ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಿದೆ.

ಈಗ ಕೋವಿಡ್‌–19 ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು, ಮುಂದೆ ಕೈಗೊಳ್ಳಬೇಕಾಗಿರುವ ಕ್ರಮಗಳನ್ನು ಅರಿಯುವುದಕ್ಕಾಗಿ ಉನ್ನತ ಮಟ್ಟದ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.