ನವದೆಹಲಿ:ಕೃಷಿಕ ಸಮುದಾಯಕ್ಕೆ ಹಣಕಾಸು ನೆರವು ಕಲ್ಪಿಸಲು ಕೃಷಿ ಮೂಲಸೌಕರ್ಯ ನಿಧಿಯಡಿ 1 ಲಕ್ಷ ಕೋಟಿ ರೂಪಾಯಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ತಿಳಿಸಿದರು.
ಬಲರಾಂ ಜಯಂತಿ, ದಾವು ಜನ್ಮೋತ್ಸವ ಸಂದರ್ಭದಲ್ಲಿ ಜನತೆಗೆ ಶುಭ ಕೋರಿ ಮಾಡಿರುವ ಸರಣಿ ಟ್ವೀಟ್ ನಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.
ಪಿಎಂ-ಕಿಸಾನ್ ಯೋಜನೆಯಡಿ 8.5 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ₹17 ಸಾವಿರ ಕೋಟಿ ಬಿಡುಗಡೆ ಮಾಡಲಾಗುವುದು. ಕೋವಿಡ್ ಸಂಕಷ್ಟದ ಸಮಯದಲ್ಲಿ ಈ ಯೋಜನೆ ಕೃಷಿಕರಿಗೆ ಪ್ರಮುಖವಾಗಿ ನೆರವಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.