ADVERTISEMENT

ನಾಳೆ 3 ಗಂಟೆಗೆ ಎಲ್ಲ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೊ ಕಾನ್ಫರೆನ್ಸ್

​ಪ್ರಜಾವಾಣಿ ವಾರ್ತೆ
Published 10 ಮೇ 2020, 10:15 IST
Last Updated 10 ಮೇ 2020, 10:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಸದ್ಯ ಜಾರಿಯಲ್ಲಿರುವ ಲಾಕ್‌ಡೌನ್ ಕುರಿತಾಗಿ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಜ್ಯ ಮುಖ್ಯಮಂತ್ರಿಗಳೊಂದಿಗೆ ಮತ್ತೊಂದು ವಿಡಿಯೊ ಕಾನ್ಫರೆನ್ಸ್ ನಡೆಸಲಿದ್ದು, ಮೇ 17 ರಂದು ಮುಕ್ತಾಯಗೊಳ್ಳುವ ನಿರೀಕ್ಷೆಯಿರುವ ಲಾಕ್‌ಡೌನ್ ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಆರೋಗ್ಯ ಕಾರ್ಯದರ್ಶಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದರು.

ಕೆಂಪು, ಹಸಿರು ಮತ್ತು ಕಿತ್ತಳೆ ವಲಯಗಳೆಂದು ಗುರುತಿಸುವಿಕೆಯ ನಿಯಮಗಳಿಗೆ ಹಲವು ರಾಜ್ಯಗಳು ಆಕ್ಷೇಪಣೆ ವ್ಯಕ್ತಪಡಿಸಿವೆ. ವಲಸಿಗರು ಜಿಲ್ಲೆಗಳಿಗೆ ಮರಳುವ ಮೂಲಕ ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಹೆಚ್ಚಿನ ಜಿಲ್ಲೆಗಳು ಕೆಂಪು ವಲಯದ ವ್ಯಾಪ್ತಿಗೆ ಬರುತ್ತಿವೆ. ಹೀಗಾಗಿ ಇದು ಸಹಜ ಸ್ಥಿತಿಗೆ ಮರಳಲು ಕಷ್ಟವಾಗುತ್ತಿದೆ ಎಂದು ವಾದಿಸಿವೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಸದ್ಯ ವಲಯಗಳನ್ನು ವಿಂಗಡಿಸುವ ಸಂದರ್ಭದಲ್ಲಿ, ಕ್ವಾರಂಟೈನ್‌ ಕೇಂದ್ರಗಳನ್ನು ಹೊಂದಿರುವ ಪ್ರದೇಶಗಳನ್ನು ಕೆಂಪು ವಲಯಗಳಾಗಿ ವಿಂಗಡಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.