ADVERTISEMENT

ಪಶ್ಚಿಮ ಬಂಗಾಳ ಚುನಾವಣೆ: ದಾಖಲೆ ಪ್ರಮಾಣದ ಮತದಾನಕ್ಕೆ ಮೋದಿ ಮನವಿ

ಪಿಟಿಐ
Published 10 ಏಪ್ರಿಲ್ 2021, 5:38 IST
Last Updated 10 ಏಪ್ರಿಲ್ 2021, 5:38 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ‘ಪಶ್ಚಿಮ ಬಂಗಾಳದಲ್ಲಿ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ‍ಪ್ರಾರಂಭವಾಗಿದ್ದು, ಜನರು ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಬೇಕು’ ಎಂದು ಪ್ರಧಾನಿ ಮೋದಿ ಅವರು ಜನರಲ್ಲಿ ಕೋರಿದ್ದಾರೆ.

‘ಪಶ್ಚಿಮ ಬಂಗಾಳದಲ್ಲಿ ಜನರು ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಬೇಕು. ವಿಶೇಷವಾಗಿ ಯುವಕರು ಮತ್ತು ಮಹಿಳೆಯರು ಹೆಚ್ಚಿನ ‍ಪ್ರಮಾಣದಲ್ಲಿ ಮತ ಚಲಾಯಿಸಬೇಕು’ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಸದ್ಯ ಮೂರು ಹಂತಗಳು ಮುಗಿದಿವೆ.

ADVERTISEMENT

44 ಸ್ಥಾನಗಳಿಗಾಗಿ ನಾಲ್ಕನೇ ಹಂತದ ಮತದಾನ ಆರಂಭವಾಗಿದೆ. ಮೇ 2 ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.