ADVERTISEMENT

ತಿರುಪತಿ: ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ

​ಪ್ರಜಾವಾಣಿ ವಾರ್ತೆ
Published 9 ಜೂನ್ 2019, 17:30 IST
Last Updated 9 ಜೂನ್ 2019, 17:30 IST
ಎಎನ್‌ಐ ಚಿತ್ರ
ಎಎನ್‌ಐ ಚಿತ್ರ   

ತಿರುಪತಿ: ಎರಡು ದಿನಗಳ ಶ್ರೀಲಂಕಾ ಮತ್ತು ಮಾಲ್ಡೀವ್ಸ್ಭೇಟಿಯ ನಂತರ ಪ್ರಧಾನಿ ನರೇಂದ್ರ ಮೋದಿ ಆಂಧ್ರ ಪ್ರದೇಶ ತಲುಪಿದ್ದು ಭಾನುವಾರ ರಾತ್ರಿ ತಿರುಪತಿಯ ತಿರುಮಲ ದೇವಸ್ಥಾನದಲ್ಲಿ ತಿಮ್ಮಪ್ಪನ ದರ್ಶನ ಪಡೆದರು. ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಜತೆಗಿದ್ದರು.

ಆಂಧ್ರಪ್ರದೇಶದನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಜಗನ್ ಮೋಹನ್ ರೆಡ್ಡಿಯವರಿಗೆ ಶುಭಕೋರಿದ ಅವರು ಕೇಂದ್ರ ಸರ್ಕಾರ ರಾಜ್ಯದ ಜನರ ಹಿತಾಸಕ್ತಿಯನ್ನುಕಾಪಾಡಲಿದೆಎಂಬ ಭರವಸೆಯನ್ನು ನೀಡಿದ್ದಾರೆ. ಆಂಧ್ರಪ್ರದೇಶದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಜಗನ್ ಶ್ರಮಿಸಲಿದ್ದಾರೆ ಎಂದು ಅವರು ಆಶಯ ವ್ಯಕ್ತಪಡಿಸಿದರು.

ಶ್ರೀಲಂಕಾದಲ್ಲಿ ದಾಳಿಗೊಳಗಾದ ಚರ್ಚ್‌ ಭೇಟಿ ನೀಡಿ ಮೃತರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸಿಭಯೋತ್ಪಾದನೆ ವಿರುದ್ಧಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಶ್ರೀಲಂಕಾವುಈ ಹೇಡಿಗಳ ಕೃತ್ಯಗಳಿಗೆ ಜಗ್ಗುವುದಿಲ್ಲ ಮತ್ತೊಮ್ಮೆ ಉದಯಿಸಿಬರಲಿದೆ ಎಂಬವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.