ADVERTISEMENT

ವಿವಿಧ ಬೇಡಿಕೆ: ಮೋದಿ ಸಹೋದರ ಪ್ರಹ್ಲಾದ್‌ ಮೋದಿಯಿಂದ ಧರಣಿ

ಪಿಟಿಐ
Published 2 ಆಗಸ್ಟ್ 2022, 2:00 IST
Last Updated 2 ಆಗಸ್ಟ್ 2022, 2:00 IST
   

ನವದೆಹಲಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ನ್ಯಾಯಬೆಲೆ ಅಂಗಡಿ ವಿತರಕರ ಒಕ್ಕೂಟದ (ಎಐಎಫ್‌ಪಿಎಸ್‌ಡಿಎಫ್) ಅಧ್ಯಕ್ಷರೂ ಆದ ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್‌ ಮೋದಿ ಅವರು ಮಂಗಳವಾರ ಧರಣಿ ನಡೆಸಲಿದ್ದಾರೆ.

ಒಕ್ಕೂಟದ ಸದಸ್ಯರೊಂದಿಗೆ ಜಂತರ್ ಮಂತರ್ ಎದುರು ಧರಣಿ ನಡೆಸಿ, ಪ್ರಧಾನಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ. ಬುಧವಾರ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರನ್ನು ಭೇಟಿ ಮಾಡಲು ಯೋಜಿಸಲಾಗಿದೆ ಎಂದು ಎಐಎಫ್‌ಪಿಎಸ್‌ಡಿಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಅಕ್ಕಿ, ಗೋಧಿ ಮತ್ತು ಸಕ್ಕರೆ ಮೇಲಿನ ನಷ್ಟಕ್ಕೆ ಪರಿಹಾರ ನೀಡಬೇಕು, ಖಾದ್ಯ ತೈಲ ಮತ್ತು ಬೇಳೆ ಕಾಳುಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಸರಬರಾಜು ಮಾಡುವುದು ಸೇರಿದಂತೆ ಒಂಬತ್ತು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದೆ.

ADVERTISEMENT

‘ಪಶ್ಚಿಮ ಬಂಗಾಳದಲ್ಲಿ ಇರುವ ಹಾಗೆ ಉಚಿತವಾಗಿ ಪಡಿತರ ವಿತರಣೆ ಮಾಡುವ ವ್ಯವಸ್ಥೆಯನ್ನು ದೇಶದಾದಾದ್ಯಂತ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.