ADVERTISEMENT

ಉದ್ಯಮಿ ನೀರವ್‌ ಮೋದಿ ವಿರುದ್ಧ ಹೊಸ ಆರೋಪಪಟ್ಟಿ

ಪಿಟಿಐ
Published 11 ಮಾರ್ಚ್ 2019, 19:49 IST
Last Updated 11 ಮಾರ್ಚ್ 2019, 19:49 IST
Nirav modi
Nirav modi   

ನವದೆಹಲಿ: ಪಂಜಾಬ್‌ ನ್ಯಾಷನಲ್ ಬ್ಯಾಂಕ್‌ಗೆ ಸಾವಿರಾರು ಕೋಟಿ ವಂಚನೆ ಎಸಗಿದ ಪ್ರಕರಣದ ಪ್ರಮುಖ ಆರೋಪಿ ನೀರವ್‌ ಮೋದಿ ವಿರುದ್ಧ ಜಾರಿ ನಿರ್ದೇಶನಾಲಯ ಹೊಸದಾಗಿ ಆರೋಪಪಟ್ಟಿ ದಾಖಲಿಸಿದೆ.

ಅಕ್ರಮ ಹಣ ವರ್ಗಾವಣೆ ಕಾನೂನಿನಡಿ ಆರೋಪಪಟ್ಟಿಯನ್ನು ಮುಂಬೈನ ಪಿಎಂಎಲ್‌ಎ ಕೋರ್ಟ್‌ನಲ್ಲಿ ದಾಖಲಿಸಿರುವುದಾಗಿ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

‘ನೀರವ್‌ ಮತ್ತು ಇತರರ ವಿರುದ್ಧ ಇದು ಪೂರಕ ಆರೋಪಪಟ್ಟಿ. ಇ.ಡಿ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ ಮತ್ತು ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ’ ಎಂದು ಹೇಳಿದ್ದಾರೆ.

ADVERTISEMENT

ಲಂಡನ್‌ನ ವೆಸ್ಟ್‌ಎಂಡ್‌ನಲ್ಲಿ ಕೋಟ್ಯಂತರ ಮೌಲ್ಯದ ಅಪಾರ್ಟ್‌ಮೆಂಟ್‌ನಲ್ಲಿ ನೀರವ್‌ ಐಷಾರಾಮಿ ಜೀವನ ನಡೆಸುತ್ತಿರುವುದು ಪತ್ತೆಯಾದ ನಂತರ ಇ.ಡಿ ಆರೋಪಪಟ್ಟಿ ದಾಖಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.