ADVERTISEMENT

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ:ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ FIRಗೆ ಆದೇಶ

ಪಿಟಿಐ
Published 21 ಫೆಬ್ರುವರಿ 2026, 16:12 IST
Last Updated 21 ಫೆಬ್ರುವರಿ 2026, 16:12 IST
<div class="paragraphs"><p>ಸ್ವಾಮಿ ಅವಿಮುಕ್ತೇಶ್ವರಾನಂದ</p></div>

ಸ್ವಾಮಿ ಅವಿಮುಕ್ತೇಶ್ವರಾನಂದ

   

ಲಖನೌ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸ್ವಾಮಿ ಅವಿಮುಕ್ತೇಶ್ವರಾನಂದ ಮತ್ತು ಅವರ ಶಿಷ್ಯರೊಬ್ಬರ ವಿರುದ್ಧ ಪ್ರಕರಣ ದಾಖಲಿಸುವಂತೆ ಪ್ರಯಾಗರಾಜ್‌ನ ಪೋಕ್ಸೊ ಪ್ರಕರಣಗಳ ವಿಶೇಷ ನ್ಯಾಯಾಲಯವೊಂದು ಶನಿವಾರ ಆದೇಶಿಸಿದೆ.

ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ವಿನೋದ್‌ ಕುಮಾರ್‌ ಚೌರಾಸಿಯಾ ಅವರು ಪೊಲಿಸರಿಗೆ ನಿರ್ದೇಶನ ನೀಡಿದ್ದಾರೆ.

ADVERTISEMENT

‘ಝೂಸಿ ಪೊಲೀಸ್‌ ಠಾಣೆಯಲ್ಲಿ ಸ್ವಾಮಿ ಅವಿಮುಕ್ತೇಶ್ವರಾನಂದ ಮತ್ತು ಅವರ ಶಿಷ್ಯರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ವಾರಾಣಸಿಯಲ್ಲಿರುವ ಆಶ್ರಮದಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ಅರೋಪಿಸಿ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನ ಅಧ್ಯಕ್ಷ ಅಶುತೋಷ್‌ ಬ್ರಹ್ಮಚಾರಿ ಅರ್ಜಿ ಸಲ್ಲಿಸಿದ್ದರು..

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಕ್ಕಳ ಹೇಳಿಕೆ ದಾಖಲಿಸಿಕೊಂಡು, ಪೊಲೀಸರ ವರದಿಯನ್ನು ಪರಿಶೀಲಿಸಿದ್ದ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದ ಸಿ.ಡಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವುದಾಗಿ ಅರ್ಜಿದಾರರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.