ADVERTISEMENT

‘ಪೋಕ್ಸೊ’ ದುರ್ಬಳಕೆ: ಸುಪ್ರೀಂ ಕೋರ್ಟ್ ಕಳವಳ

ಪಿಟಿಐ
Published 4 ನವೆಂಬರ್ 2025, 13:22 IST
Last Updated 4 ನವೆಂಬರ್ 2025, 13:22 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ವೈವಾಹಿಕ ಕಲಹ ಮತ್ತು ಹದಿಹರೆಯದವರ ನಡುವಿನ ಸಹಮತದ ಸಂಬಂಧಗಳ ಪ್ರಕರಣಗಳಲ್ಲಿ ‘ಪೋಕ್ಸೊ’ ಕಾಯ್ದೆ ದುರುಪಯೋಗ ಆಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಕಳವಳ ವ್ಯಕ್ತಪಡಿಸಿದೆ.

ಈ ಸಂಬಂಧ ಕಾನೂನು ನಿಬಂಧನೆಗಳ ಕುರಿತು ಬಾಲಕರು ಮತ್ತು ಪುರುಷರಿಗೆ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದು ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಆರ್‌. ಮಹದೇವನ್‌ ಅವರ ಪೀಠ ಒತ್ತಿ ಹೇಳಿದೆ.  

‘ದೇಶದಲ್ಲಿ ಬಾಲಕಿಯರು ಮತ್ತು ಮಹಿಳೆಯರಿಗೆ ಸುರಕ್ಷಿತ ವಾತಾವರಣ ಮೂಡಿಸಲು ‘ಪೋಕ್ಸೊ’ ಕಾಯ್ದೆ ಬಗ್ಗೆ ಜನರಲ್ಲಿ ಸಂವೇದನಾಶೀಲತೆ ಬೆಳೆಯುವಂತೆ ಮಾಡಬೇಕಿದೆ. ಅದಕ್ಕೆ ಅಗತ್ಯ ನಿರ್ದೇಶನಗಳನ್ನು ನೀಡಬೇಕು’ ಎಂದು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ವಿಚಾರಣೆಯನ್ನು ಪೀಠ ನಡೆಸಿತು.

ADVERTISEMENT

ಈ ಕುರಿತು ಕೆಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಇಲ್ಲಿಯವರೆಗೆ ಪ್ರತಿಕ್ರಿಯೆ ಸಲ್ಲಿಸಿಲ್ಲ ಎಂಬುದನ್ನು ಗಮನಿಸಿದ ಪೀಠವು, ವಿಚಾರಣೆಯನ್ನು ಡಿಸೆಂಬರ್‌ 2ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.