ADVERTISEMENT

ಬಿಹಾರ | ಧಾರ್ಮಿಕ ಮೆರವಣಿಗೆ ವೇಳೆ ಎರಡು ಸಮುದಾಯಗಳ ನಡುವೆ ಘರ್ಷಣೆ: 10 ಮಂದಿ ಬಂಧನ

ಪಿಟಿಐ
Published 18 ಫೆಬ್ರುವರಿ 2025, 10:09 IST
Last Updated 18 ಫೆಬ್ರುವರಿ 2025, 10:09 IST
<div class="paragraphs"><p>ಬಂಧನ ( ಸಾಂಕೇತಿಕ ಚಿತ್ರ)</p></div>

ಬಂಧನ ( ಸಾಂಕೇತಿಕ ಚಿತ್ರ)

   

ಜಮುಯಿ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಧಾರ್ಮಿಕ ಮೆರವಣಿಗೆ ವೇಳೆ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಜಮುಯಿ ಜಿಲ್ಲಾಧಿಕಾರಿ ಅಭಿಲಾಷಾ ಶರ್ಮಾ, ‘ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಈವರೆಗೆ ಖುಷ್ಬೂ ಪಾಂಡೆ ಎಂಬ ಮಹಿಳೆ ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. ಬಲಿಯಾಡಿಹ್ ಪ್ರದೇಶದಲ್ಲಿ ಭಾನುವಾರ ನಡೆದ ಧಾರ್ಮಿಕ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಉಂಟಾಗಿದ್ದು, ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.

ADVERTISEMENT

ಘಟನೆಯ ಬಳಿಕ ಪ್ರದೇಶದಲ್ಲಿ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಇಂದು (ಮಂಗಳವಾರ) ಸಂಜೆಯ ವೇಳೆಗೆ ಸೇವೆಯನ್ನು ಮರುಸ್ಥಾಪಿಸಲಾಗುವುದು. ಘಟನೆಯ ನಂತರ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ. ಪರಿಸ್ಥಿತಿ ಉದ್ವಿಗ್ನಗೊಳ್ಳದಂತೆ ನೋಡಿಕೊಳ್ಳಲು ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. 50–60 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪರಿಸ್ಥಿತಿ ಈಗ ಸಂಪೂರ್ಣ ನಿಯಂತ್ರಣದಲ್ಲಿದೆ. ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯದೆ ಮೆರವಣಿಗೆ ನಡೆಸಿದ ಆರೋಪದ ಮೇಲೆ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಝಾಝಾ ಪೊಲೀಸ್ ಠಾಣೆಯ ಎಸ್‌ಎಚ್ಒ ಸಂಜಯ್ ಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.