ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಗೆ ಸೇರಿದ್ದ ಏಳು ಮಂದಿ ಭೂಗತ ಕಾರ್ಯಕರ್ತರನ್ನು ಬಂಧಿಸಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.
‘ನಿಷೇಧಿತ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವ ಏಳು ಭಯೋತ್ಪಾದಕ ಸಹಚರರನ್ನು ಬಂಧಿಸಿರುವುದಾಗಿ‘ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಬಂಧಿತ ವ್ಯಕ್ತಿಗಳಿಂದ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.