ಮುಂಬೈ: ಒಂದು ಸಮುದಾಯದ ಸದಸ್ಯರನ್ನು ಭಯೋತ್ಪಾದಕರು ಎಂದು ಕರೆದಿರುವ ಆರೋಪದ ಮೇಲೆ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಕೇಸು ದಾಖಲಾಗಿದೆ.
ಇಲ್ಲಿನ ಅಂಬೋಲಿ ಉಪನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ವಕೀಲ ಆಲಿ ಖಾಶಿಪ್ ಖಾನ್ ಎಂಬುವರು ನೀಡಿದ ದೂರಿನ ಅನ್ವಯ ಪೊಲೀಸರು ಕಂಗಾನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಂಗನಾ ಸಹೋದರಿ ರಂಗೋಲಿ ಚಂಡೆಲ್ ಈ ಹಿಂದೆ ಟ್ವಿಟರ್‌ನಲ್ಲಿನಿರ್ದಿಷ್ಟ ಸಮುದಾಯದ ಸದಸ್ಯರನ್ನು ಭಯೋತ್ಪಾದಕರು ಎಂದು ಹೇಳಿದ್ದರು. ಅವರ ಹೇಳಿಕೆಯನ್ನು ಸಮರ್ಥಿಸಿ ಕಂಗಾನ ರನೌತ್ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ವಿಡಿಯೊ ಹೇಳಿಕೆ ನೀಡಿದ್ದರು. ಆ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.
ಕಂಗಾನ ವಿರುದ್ಧ ನೀಡಿರುವ ದೂರಿನಲ್ಲಿ ವಿಡಿಯೊ ಹೇಳಿಕೆಯನ್ನು ದಾಖಲಿಸಲಾಗಿದ್ದು, ಪೊಲೀಸ್ ಅಧಿಕಾರಿಗಳಿಗೆ ವಿಡಿಯೊ ತುಣುಕನ್ನು ದೂರುದಾರರು ನೀಡಿದ್ದಾರೆ.
ಈಗಾಗಲೇ ರಂಗೋಲಿ ಚಂಡೆಲ್ ಟ್ವಿಟರ್ ಖಾತೆಯನ್ನು ಅಮಾನತು ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.