ADVERTISEMENT

ಬರೇಲಿ: ಕಾನ್‌ಸ್ಟೆಬಲ್‌ ಪರೀಕ್ಷಾರ್ಥಿ ಆತ್ಮಹತ್ಯೆ

ಪಿಟಿಐ
Published 25 ಆಗಸ್ಟ್ 2024, 13:10 IST
Last Updated 25 ಆಗಸ್ಟ್ 2024, 13:10 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬರೇಲಿ: ಪೊಲೀಸ್ ಕಾನ್‌ಸ್ಟೆಬಲ್‌ ನೇಮಕಾತಿ ಪರೀಕ್ಷೆ ಚೆನ್ನಾಗಿ ಮಾಡಿಲ್ಲ ಎಂಬ ಕಾರಣಕ್ಕೆ 24 ವರ್ಷದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಫತೇಗಂಜ್ ಪೂರ್ವ ಪ್ರದೇಶದ ಸೈದ್‌ಪುರದ ಮಂಜಾ ಗ್ರಾಮದ ಯೋಗೇಶ್ ಕುಮಾರ್ ಶನಿವಾರ ತಡರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಗೌರವ್ ಸಿಂಗ್ ತಿಳಿಸಿದ್ದಾರೆ.

ADVERTISEMENT

ಸ್ಥಳದಲ್ಲಿ ಮರಣಪತ್ರ ಪತ್ತೆಯಾಗಿಲ್ಲ ಎಂದು ಸಿಂಗ್ ಹೇಳಿದ್ದಾರೆ.

ಕುಮಾರ್ ಅವರ ತಂದೆ ಅಜಯ್‌ಪಾಲ್ ಯಾದವ್ ಅವರು, ತಮ್ಮ ಮಗ ಕಳೆದ ಐದು ವರ್ಷಗಳಿಂದ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಕುಮಾರ್ ಶುಕ್ರವಾರ ರಾಂಪುರ ಜಿಲ್ಲೆಯಲ್ಲಿ ಪರೀಕ್ಷೆಯನ್ನು ಬರೆದಿದ್ದು, ಪರೀಕ್ಷೆಯನ್ನು ಚೆನ್ನಾಗಿ ಮಾಡಿರಲಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.