ADVERTISEMENT

ದೆಹಲಿ: ಅಕ್ರಮ ವಾಸವಿದ್ದ ಬಾಂಗ್ಲಾದೇಶ ದಂಪತಿ ಗಡಿಪಾರು

ಪಿಟಿಐ
Published 3 ಜನವರಿ 2025, 10:46 IST
Last Updated 3 ಜನವರಿ 2025, 10:46 IST
<div class="paragraphs"><p>ಬಾಂಗ್ಲಾದೇಶ ಧ್ವಜ</p></div>

ಬಾಂಗ್ಲಾದೇಶ ಧ್ವಜ

   

– ಪಿಟಿಐ ಚಿತ್ರ

ನವದೆಹಲಿ: ನೈರುತ್ಯ ದೆಹಲಿಯ ಸಫ್ದರ್‌ಜಂಗ್‌ನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಪತ್ತೆ ಮಾಡಿ, ಗಡಿಪಾರು ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಲಿಯಾಕ್‌ (54) ಹಾಗೂ ಅವತ ಪತ್ನಿ (ನಸ್ರೀನ್‌) 2012ರಿಂದ ದೆಹಲಿಯಲ್ಲಿ ವಾಸವಾಗಿದ್ದರು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

‘ಗ್ರೀನ್ ಪಾರ್ಲ್ ಸಮೀಪದ ಸಂಶಾನ್ ಘಾಟ್‌ನಲ್ಲಿ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿ ಎನ್‌ಸಿಆರ್‌ನ ಹಲವು ಪ್ರದೇಶದಲ್ಲಿ ವಾಸವಾಗಿದ್ದಾಗಿ ಅವರು ವಿಚಾರಣೆ ವೇಳೆ ಹೇಳಿದ್ದಾರೆ. ಇತ್ತೀಚೆಗೆ ಹಳೇಯ ಸಲೀಂಪುರದಲ್ಲಿ ಇದ್ದರು’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ‌.

ಅವರ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದ್ದು, ಆ ವೇಳೆ ಅವು ಅಮಾನ್ಯ ಎಂದು ಗೊತ್ತಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಕಾನೂನು ಪ್ರಕ್ರಿಯೆಗಳು ಮುಗಿದ ಬಳಿಕ ಬಾಂಗ್ಲಾದೇಶಕ್ಕೆ ಅವರನ್ನು ಗಡಿಪಾರು ಮಾಡಲು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿಗೆ ಹಸ್ತಾಂತರಿಸಲಾಗಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಜ್ಞಾನುಸಾರ, ಡಿ. 11ರಿಂದ ಬಾಂಗ್ಲಾದೇಶದ ಅಕ್ರಮ ವಲಸಿಗರ ಪತ್ತೆ ಕಾರ್ಯ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.