ADVERTISEMENT

ಪುಲ್ವಾಮಾ: ಉಗ್ರರ ಜೊತೆಗಿನ ಕಾಳಗದಲ್ಲಿ ಪೊಲೀಸ್ ಅಧಿಕಾರಿ ಹುತಾತ್ಮ

​ಪ್ರಜಾವಾಣಿ ವಾರ್ತೆ
Published 18 ಜೂನ್ 2022, 1:42 IST
Last Updated 18 ಜೂನ್ 2022, 1:42 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಮನೆಯೊಂದರಲ್ಲಿ ಉಗ್ರರ ಜೊತೆಗಿನ ಕಾಳಗದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಹುತಾತ್ಮರಾಗಿರುವುದಾಗಿ ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

ಫಾರೂಕ್ ಅಹಮ್ಮದ್ ಮಿರ್, ಹುತಾತ್ಮ ಸಬ್ ಇನ್ಸ್‌ಸ್ಪೆಕ್ಟರ್. ಶುಕ್ರರಾತ್ರಿ ತಡರಾತ್ರಿ ಪ್ಯಾಂಪೋರ್ ಪ್ರದೇಶದ ಸಂಬೂರಾದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರ ಗುಂಡಿಗೆ ಪ್ರಾಣ ತ್ಯಾಗ ಮಾಡಿದ್ದಾರೆ.

ಸಿಟಿಸಿ ಲೆತ್ಪೊರಾದ ಐಆರ್‌ಪಿ 23ನೇ ಬೆಟಾಲಿನ್‌ಗೆ ಮಿರ್ ಅವರನ್ನು ನಿಯೋಜಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.