ADVERTISEMENT

ಮಮತಾ ಮೇಲೆ ಹಲ್ಲೆ: ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಪಿಟಿಐ
Published 11 ಮಾರ್ಚ್ 2021, 8:32 IST
Last Updated 11 ಮಾರ್ಚ್ 2021, 8:32 IST
ಮಮತಾ ಅವರ ಆರೋಗ್ಯ ವಿಚಾರಿಸಲು ಕೋಲ್ಕತ್ತದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಬಂದ ರಾಜ್ಯಪಾಲ ಜಗದೀಪ್‌ ಧನಕರ್‌
ಮಮತಾ ಅವರ ಆರೋಗ್ಯ ವಿಚಾರಿಸಲು ಕೋಲ್ಕತ್ತದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಬಂದ ರಾಜ್ಯಪಾಲ ಜಗದೀಪ್‌ ಧನಕರ್‌   

ನಂದಿಗ್ರಾಮ: ‍ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಟಿಎಂಸಿ ಮುಖಂಡರಾದ ಶೇಖ್ ಸೂಫಿಯಾನ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್ 341 (ದುರುದ್ದೇಶದಿಂದ ತಡೆ ಒಡ್ಡುವುದು) ಮತ್ತು 323 (ಸ್ವಯಂಪ್ರೇರಿತವಾಗಿ ಘಾಸಿಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪುರ್ಬಾ ಮೇದಿನಿಪುರ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

‘ಸೂಫಿಯಾನ್ ಅವರು ನೀಡಿದ ದೂರನ್ನು ಸ್ವೀಕರಿಸಿದ್ದೇವೆ. ಈಗಾಗಲೇ ತನಿಖೆ ನಡೆಯುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದೇವೆ‘ ಎಂದು ಅಧಿಕಾರಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.