ಪ್ರಾತಿನಿಧಿಕ ಚಿತ್ರ
ಗರ್ವಾ: ಜಾರ್ಖಂಡ್‌ನ ಗಢವಾದ ಪೊಲೀಸ್ ಠಾಣೆ ಗೋಶಾಲೆಯಾಗಿ ಪರಿವರ್ತನೆಯಾಗಿದೆ. 170 ಜಾನುವಾರುಗಳ ಉಸ್ತುವಾರಿಯನ್ನು ಪೊಲೀಸರು ವಹಿಸಿಕೊಂಡಿದ್ದಾರೆ!
‘ರಾಜ್ಯದಲ್ಲಿ ಗೋಹತ್ಯೆ ನಿಷೇಧವಿದ್ದರೂ ಜಾನುವಾರುಗಳನ್ನು ವಧೆ ಮಾಡಲು ಕೊಂಡೊಯ್ಯಲಾಗುತ್ತಿದೆ ಎಂದು ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷದ್ ಸದಸ್ಯರು ಆರೋಪಿಸಿದ್ದರಿಂದ ಅವುಗಳನ್ನು ಠಾಣೆಗೆ ಕರೆದೊಯ್ಯಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮನ್ ಕುಮಾರ್ ತಿಳಿಸಿದ್ದಾರೆ.
‘ಜಾನುವಾರುಗಳನ್ನು ಮಾರಾಟ ಮಾಡಲು ಗಢವಾದ ಪ್ರಸಿದ್ಧ ವಾರದ ಸಂತೆಗೆ ಕರೆದೊಯ್ಯಲಾಗುತ್ತಿತ್ತು ಎಂದು ವ್ಯಾಪಾರಿಗಳು ಹೇಳಿದ್ದಾರೆ. ಸದ್ಯ ಜಾನುವಾರುಗಳನ್ನು ಪೊಲೀಸ್ ಠಾಣೆಯಲ್ಲಿ ಇರಿಸಿದ್ದೇವೆ. ಎರಡೂ ಕಡೆಯವರ ಹೇಳಿಕೆಗಳ ಬಗ್ಗೆ ತನಿಖೆ ನಡೆಸುತ್ತೇವೆ. ವಾರದ ಸಂತೆಯಲ್ಲಿ ಜಾನುವಾರುಗಳ ಮಾರಾಟ ಹಾಗೂ ಖರೀದಿ ನಡೆಯುವುದು ಸತ್ಯ. ಅವುಗಳನ್ನು ವಧೆ ಮಾಡಲು ಕೊಂಡೊಯ್ಯಲಾಗುತ್ತಿದೆಯೇ ಎಂಬುದನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.