ADVERTISEMENT

ನೂಹ್‌: ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್‌ ಅಧಿಕಾರಿ ಹೃದಯಾಘಾತದಿಂದ ಸಾವು

ಪಿಟಿಐ
Published 28 ಆಗಸ್ಟ್ 2023, 11:41 IST
Last Updated 28 ಆಗಸ್ಟ್ 2023, 11:41 IST
ಸಾವು (ಪ್ರಾತಿನಿಧಿಕ ಚಿತ್ರ)
ಸಾವು (ಪ್ರಾತಿನಿಧಿಕ ಚಿತ್ರ)   

ನೂಹ್‌: ಹರಿಯಾಣದ ನೂಹ್‌ನಲ್ಲಿ ನಡೆಯುತ್ತಿರುವ ಹಿಂದೂ ಸಂಘಟನೆಗಳ ಬ್ರಿಜ್‌ ಮಂಡಲ್‌ ಯಾತ್ರೆಯ ಭದ್ರತೆಗೆ ನಿಯೋಜನೆಗೊಂಡಿದ್ದ ಸಬ್ ಇನ್ಸ್‌ಪೆಕ್ಟರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

ಹಕಮುದ್ದೀನ್‌ (47) ಮೃತ ಸಬ್ ಇನ್ಸ್‌ಪೆಕ್ಟರ್.

ಮಧ್ಯಾಹ್ನ 12.30ರ ಹೊತ್ತಿಗೆ ಹಕಮುದ್ದೀನ್‌ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು, ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ನೀಡುತ್ತಿರುವ ವೇಳೆಯೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಅಧಿಕಾರಿ ರತನ್‌ ಲಾಲ್‌ ಮಾಹಿತಿ ನೀಡಿದ್ದಾರೆ. 

ADVERTISEMENT

ಹಿಂದೂ ಸಂಘಟನೆಗಳು ಇತ್ತೀಚೆಗೆ ನಡೆಸಿದ್ದ ಸರ್ವ ಜಾತೀಯ ಹಿಂದೂಮಹಾಪಂಚಾಯತ್‌ನಲ್ಲಿ ಶೋಭಾಯಾತ್ರೆ ನಡೆಸಲು ನಿರ್ಧರಿಸಲಾಗಿತ್ತು.

ಶೋಭಾಯಾತ್ರೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.